ಮಾನ್ವಿ: ‘ಶಾಂತಿ ಹಾಗೂ ಸಮಾನತೆಯ ತತ್ವಗಳನ್ನು ಬೋಧಿಸಿದ ಭಗವಾನ್ ಗೌತಮ ಬುದ್ಧರ ಸಂದೇಶಗಳನ್ನು ಮನೆ ಮನೆಗೆ ತಲುಪಿಸಿ, ಜಾಗೃತಿ ಮೂಡಿಸುವ ಕಾರ್ಯ ಅಗತ್ಯ’ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಗವಾನ್ ಬುದ್ಧರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಭಗವಾನ್ ಬುದ್ಧರು ಸಾರಿದ ಅಹಿಂಸೆ ಹಾಗೂ ಶಾಂತಿಯ ಸಂದೇಶಗಳು ಇಂದು ವಿಶ್ವದಲ್ಲಿನ ವಿವಿಧ ರಾಷ್ಡ್ರಗಳ ನಡುವೆ ನಡೆಯುತ್ತಿರುವ ಯುದ್ದದ ವಾತಾವರಣ ತಡೆಯಲು ಸೂಕ್ತ ಉತ್ತರವಾಗಿದೆ’ ಎಂದರು.

ಎಪಿಎಂಸಿ ಮಾಜಿ ನಿರ್ದೇಶಕ ಜಿ. ಶಿವರಾಜ ನಾಯಕ ಬಲ್ಲಟಗಿ ಮಾತನಾಡಿ,‘ಸತ್ಯ ಮತ್ತು ಆಹಿಂಸೆಯನ್ನು ಒಳಗೊಂಡ ಪಂಚಶೀಲ ತತ್ವಗಳನ್ನು ಗೌತಮ ಬುದ್ಧರು ನಮಗೆ ಬೋಧಿಸಿದ್ದಾರೆ. ಅವುಗಳನ್ನು ನಾವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳಬೇಕಾಗಿದೆ’ ಎಂದು ಹೇಳಿದರು.

ಶಿಕ್ಷಕಿ ಆಶ್ವಿನಿ ಸಂಗಮೇಶ ಅವರು ಗೌತಮ ಬುದ್ಧನ ಜೀವನ ಮತ್ತು ಸಂದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ತಾಲ್ಲೂಕು ಆಡಳಿತದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್, ಪಿಐ ಸೋಮಶೇಖರ ಎಸ್.ಕೆಂಚರೆಡ್ಡಿ, ಕೃಷಿ ಅಧಿಕಾರಿ ಗುರುನಾಥ ಭೂಸನೂರ, ತಾಲ್ಲೂಕುಮಟ್ಟದ ಅಧಿಕಾರಿಗಳು ಹಾಗೂ ಸಂಘ–ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-32-413419027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.