ಮಾನ್ವಿ: ತಾಲ್ಲೂಕಿನ ಯಡಿವಾಳ ಗ್ರಾಮದಲ್ಲಿ ಭಾನುವಾರ ತಡ ರಾತ್ರಿ ರೈತನ ಜಮೀನಿನಲ್ಲಿದ್ದ ಮೆಣಸಿನಕಾಯಿ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ರೈತ ಮೌಲಾಲಿ ನಾಯಕ ಯಡಿವಾಳ ಅವರಿಗೆ ಸೇರಿದ ಒಟ್ಟು 4 ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 30 ಕ್ವಿಂಟಾಲ್ ಮೆಣಸಿನಕಾಯಿ ರಾಶಿಗೆ ದುಷ್ಕರ್ಮಿಗಳಿಂದ ಬೆಂಕಿ ಹಚ್ಚಲಾಗಿದೆ. ಸುಮಾರು ₹8 ಲಕ್ಷ ಮೌಲ್ಯದ ಮೆಣಸಿನಕಾಯಿ ರಾಶಿ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಗ್ರಾಮ ಲೆಕ್ಕಾಧಿಕಾರಿ ಶ್ರೀಕಾಂತ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೆಣಸಿನಕಾಯಿ ರಾಶಿಗೆ ಬೆಂಕಿ ಹಚ್ಚಿದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ನಷ್ಟಕ್ಕೆ ಒಳಗಾದ ರೈತ ಮೌಲಾಲಿ ನಾಯಕ ಅವರಿಗೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.