ಮಾನ್ವಿ: ‘ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವದ ಪರಿಸ್ಥಿತಿ ಉದ್ಭವಿಸದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸಚಿವ ಎನ್.ಎಸ್.ಬೋಸರಾಜು ಸೂಚನೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಪ್ರತ್ಯೇಕವಾಗಿ ತುಂಗಭದ್ರಾ ಎಡದಂಡೆ ಕಾಲುವೆಯಿಂದ ಈಗಾಗಲೇ ನೀರು ಸರಬರಾಜು ಮಾಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಮೂಲಕ ಕುಡಿಯುವ ನೀರಿನ ಕೆರೆಗಳಿಗೆ ನೀರು ಹರಿಸಲು ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.

‘ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪರಿಶೀಲಿಸಬೇಕು. ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಎಲ್ಲಾ ಅಧಿಕಾರಿಗಳು ತಕ್ಷಣ ಇತ್ಯರ್ಥಗೊಳಿಸಿ ಜನರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು’ ಎಂದರು.

‘ಗ್ರಾಮೀಣ ಭಾಗದಲ್ಲಿ ಕೊಳವೆ ಬಾವಿಗಳ ಹಾಗೂ ಮೋಟರ್ಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅತಿಯಾಗಿ ನೀರಿನ ತೊಂದರೆ ಇರುವಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಯಿಸಬೇಕು. ತೀರಾ ನೀರಿನ ಅಭಾವ ಉಂಟಾದರೆ ಟ್ಯಾಂಕರ್ನಂತಹ ಪರ್ಯಾಯ ವ್ಯವಸ್ತೆಯ ಮೂಲಕ ನೀರು ಸರಬರಾಜು ಮಾಡಬೇಕು’ ಎಂದು ತಿಳಿಸಿದರು.

‘ತಾಲ್ಲೂಕಿನ ಅಧಿಕಾರಿಗಳು ಹಾಗೂ ಪುರಸಭೆ ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಬೇಸಿಗೆ ಇರುವುದರಿಂದ ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದರು.

ಶಾಸಕ ಜಿ.ಹಂಪಯ್ಯ ನಾಯಕ, ತಹಶೀಲ್ದಾರ್ ಭೀಮರಾಯ ರಾಮಸಮುದ್ರ, ನಗರ ಯೋಜನಾ ಪ್ರಾದಿಕಾರದ ಅದ್ಯಕ್ಷ ಅಬ್ದುಲ್ ಗಫೂರ್ ಸಾಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ತಾ.ಪಂ ಇಒ ಖಾಲೀದ್ ಅಹ್ಮದ್, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-32-800543107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.