ಮಾನ್ವಿ: ಜಮಾತೆ ಇಸ್ಲಾಮಿ ಹಿಂದ್ ವತಿಯಿಂದ ಮಾರ್ಚ್ 28ರಂದು ಸಂಜೆ 7.15ಕ್ಕೆ ಪಟ್ಟಣದ ಟಿಎಪಿಸಿಎಂಎಸ್ ಮೈದಾನದಲ್ಲಿ ಈದ್ ಸೌಹಾರ್ದ ಕೂಟ ಹಮ್ಮಿಕೊಳ್ಳಲಾಗಿದೆ ಎಂದು ಜಮಾತೆ ಇಸ್ಲಾಮಿ ಹಿಂದ್ ಸ್ಥಳೀಯ ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಹೇಳಿದರು.

ಗುರುವಾರ ಪಟ್ಟಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದ ಮನೋಭಾವ ಮೂಡಿಸಲು ಈದ್-ಉಲ್ ಫಿತ್ರ್ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಕಲ್ಮಠದ ವಿರೂಪಾಕ್ಷ ಪಂಡಿ ತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸೆಂಟ್ ಮೇರಿಸ್ ಚರ್ಚ್ನ ಫಾದರ್ ಸುರೇಶ್ ವಿನ್ಸೆಂಟ್ ಸಾನ್ನಿಧ್ಯ ವಹಿಸುವರು. ಇಲಕಲ್ನ ಲಾಲ್ ಹುಸೇನ್ ಕಂದಗಲ್ ವಿಶೇಷ ಉಪನ್ಯಾಸ ನೀಡುವರು. ಸಚಿವ ಎನ್.ಎಸ್.ಬೋಸರಾಜು, ಶಾಸಕ ಹಂಪಯ್ಯ ನಾಯಕ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸುವರು’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಅಬ್ದುಲ್ ಕರೀಂ ಖಾನ್ , ಸೈಯದ್ ಅಕ್ಬರ್ ಪಾಷಾ ಹುಸೇನಿ, ಉಮರ್ ದೇವರಮನಿ, ಎಂಎಎಚ್ ಮುಖೀಮ್ , ಮುಹಮ್ಮದ್ ದಾವೂದ್ ಸಿದ್ದಿಖಿ, ಶೇಖ್ ಬಾಬಾ ಹುಸೇನ್, ಮುಹಮ್ಮದ್ ಅಕ್ತರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-32-1913774641

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.