ಮಾನ್ವಿ: ‘ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರಿನ ಸಮರ್ಪಕ ಪೂರೈಕೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಪುರಸಭೆ ಮುಖ್ಯಾಧಿಕಾರಿ ವಿಫಲರಾಗಿದ್ದಾರೆ’ ಎಂದು ಮಾಜಿ ಶಾಸಕ, ಬಿಜೆಪಿ ಮುಖಂಡ ಗಂಗಾಧರ ನಾಯಕ ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪಟ್ಟಣದಲ್ಲಿ ಕುಡಿ ಯುವ ನೀರಿನ ಸಮಸ್ಯೆ ಮತ್ತು ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ಗಮನಕ್ಕೆ ತರಲಾಗಿತ್ತು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದರೂ ಪುರಸಭೆ ಮುಖ್ಯಾಧಿಕಾರಿ ನಿರ್ಲಕ್ಷ್ಯ ತೋರಿದ್ದಾರೆ. ಸಚಿವ ಎನ್.ಎಸ್.ಬೋಸರಾಜು ಅವರ ಸೂಚನೆಯನ್ನೂ ಕಡೆಗಣಿಸಿದ್ದಾರೆ’ ಎಂದು ದೂರಿದರು.

‘ಪಟ್ಟಣದಲ್ಲಿ ಅಮೃತ-2 ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ ಕಾರ್ಯ ನಿಧಾನಗತಿಯಲ್ಲಿ ಸಾಗಿದೆ. ರಬ್ಬಣಕಲ್ ಕುಡಿಯುವ ನೀರಿನ ಕೆರೆಗೆ ನೀರು ಪೂರೈಸುವ ಕಾಲುವೆಗೆ ಚರಂಡಿ ನೀರು ಬಿಡುತ್ತಿರುವುದರಿಂದ ಕೆರೆ ನೀರು ಕಲುಷಿತಗೊಂಡು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವಾಗುತ್ತಿದೆ. ಪುರಸಭೆ ಮುಖ್ಯಾಧಿಕಾರಿ ವಾರ್ಡ್ ಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸುವ ಕೆಲಸ ಮಾಡುತ್ತಿಲ್ಲ. ಜನರ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸುತ್ತಿಲ್ಲ’ ಎಂದರು.

‘ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಅವರನ್ನು ಸೇವೆಯಿಂದ ವಜಾಗೊಳಿಸಬೇಕು’ ಎಂದರು.

‘ಮೇ 25ರಂದು ಬಿಜೆಪಿ ವತಿಯಿಂದ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು’ ಎಂದು ತಿಳಿಸಿದರು.

ಬಿಜೆಪಿ ಮಾಜಿ ಮಂಡಲ ಅಧ್ಯಕ್ಷ ಜೆ.ಸುಧಾಕರ, ಪದಾಧಿಕಾರಿಗಳಾದ ಜಗದೀಶ ಓತೂರು, ವಿಶ್ವನಾಥ ರಾಯಪ್ಪ ವಕೀಲ, ಕುಮಾರಸ್ವಾಮಿ ಮೇದಾ, ರವಿಕುಮಾರ ಸಾಹುಕಾರ, ಶ್ರೀನಿವಾಸ, ಈರಣ್ಣ ನಾಯಕ ಕರೇಗುಡ್ಡ, ಉಮಾಪತಿ ಹರವಿ, ಶರಣಯ್ಯ ಸ್ವಾಮಿ, ಭಾಸ್ಕರ್ ಜಗ್ಲಿ, ಬಸವಪ್ರಭು ಕರಡಿಗುಡ್ಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-32-457804573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.