ಮಾನ್ವಿ: ತಾಲ್ಲೂಕಿನ ಹಿರೇಕೊಟ್ನೆಕಲ್–ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊರವಲಯದ ಹೊಲದಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಮಾನ್ವಿ ಪೊಲೀಸರು ದಾಳಿ ನಡೆಸಿ, ಜಾಲದ ಕಿಂಗ್ಪಿನ್ ಸೇರಿ 11 ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಪ್ರಮುಖ ಆರೋಪಿ ತಾಯಪ್ಪ ಯಲ್ಲಪ್ಪ ಭೋವಿ ಮಾನ್ವಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾನೆ. ಆರೋಪಿ ತಾಯಪ್ಪ ಉದ್ಯೋಗ ಹುಡುಕುವ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ಹೆಚ್ಚಿನ ಸಂಬಳದ ಉದ್ಯೋಗದ ಆಮಿಷವೊಡ್ಡಿ ತನ್ನ ಜಾಲಕ್ಕೆ ಸೆಳೆಯುತ್ತಿದ್ದನು ಎನ್ನಲಾಗಿದೆ.

ಈ ಕುರಿತು ಖಚಿತ ಮಾಹಿತಿ ಪಡೆದ ಮಾನ್ವಿ ಪೊಲೀಸರು ಮಾನ್ವಿ ಪೊಲೀಸ್ ಠಾಣೆಯ ಪಿ.ಐ ಸೋಮಶೇಖರ ಎಸ್. ಕೆಂಚರೆಡ್ಡಿ ನೇತೃತ್ವದಲ್ಲಿ ಶನಿವಾರ ರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿ ಜಾಲವನ್ನು ಭೇದಿಸಿದ್ದಾರೆ.

ದಾಳಿಯ ವೇಳೆ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, ಅವರಿಗೆ ಅಗತ್ಯ ನೆರವು ಹಾಗೂ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ರಾಯಚೂರಿನ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-32-882867588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.