ಮಾನ್ವಿ: ಬಲ್ಲಟಗಿ ಗ್ರಾಮದ ಕೆಪಿಎಸ್ ಶಾಲೆಗೆ ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆ ಕೈಬಿಡಲು ಆಗ್ರಹಿಸಿ ಎಐಡಿಎಸ್ಒ ಸಂಘಟನೆಯ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಬಿಇಒ ಚಂದ್ರಶೇಖರ ದೊಡ್ಡಮನಿ ಅವರಿಗೆ ಮನವಿ ಸಲ್ಲಿಸಿದರು.

ಸಾರ್ವಜನಿಕ ಶಿಕ್ಷಣಕ್ಕೆ ಧಕ್ಕೆ ತರುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಜನತಾ ಕಾಲೊನಿ ಬಲ್ಲಟಗಿ, ಎನ್.ಹೊಸೂರು, ಸಿದ್ದಗರ್ಚ್ ಕ್ಯಾಂಪ್, ಡಾಕ್ಟರ್ ಕ್ಯಾಂಪ್, ಬಲ್ಲಟಗಿ ತಾಂಡಾ ಶಾಲೆಗಳನ್ನು ವಿಲೀನಗೊಳಿಸುವ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು. ಎನ್.ಹೊಸೂರು ಶಾಲೆಯನ್ನು ಮುಚ್ಚುವ ಬದಲಿಗೆ, ಅಲ್ಲಿ ಅಗತ್ಯವಿರುವ ಸಮರ್ಪಕ ಸೌಲಭ್ಯ ಹಾಗೂ ಶಿಕ್ಷಕರನ್ನು ನೀಡಿ ಬಲಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಡಿಎಸ್ಒ ರಾಜ್ಯ ಮುಖಂಡ ಕಲ್ಯಾಣ ಕುಮಾರ್, ಜಿಲ್ಲಾ ಕಾರ್ಯದರ್ಶಿ ಬಸವರಾಜ, ಮುಖಂಡರಾದ ಮಲ್ಲನಗೌಡ ಹಾಗೂ ನಂದಗೋಪಾಲ್, ಎನ್ಮಹೊಸೂರು ಗ್ರಾಮದ ಎಸ್ಡಿಎಂಸಿ ಅಧ್ಯಕ್ಷ ರಂಗಪ್ಪ, ಪ್ರಮುಖರಾದ ರಾಮನಗೌಡ, ಶರಣಪ್ಪ ಪೂಜಾರಿ, ಗುರುರಾಜ್, ಬಸವರಾಜ್, ಕೆ. ಶರಣಪ್ಪ, ಚೆನ್ನಪ್ಪ ಬಡಿಗೇರ, ಶರಣಪ್ಪ, ಮಲ್ಲಿಕಾರ್ಜುನ, ವೀರೇಶ್ ಕೆ., ನಾಗಪ್ಪ, ಈರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-32-878518825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.