ಮಾನ್ವಿ: ‘ತುಂಗಭದ್ರಾ ಜಲಾಶಯದ ಎಲ್ಲಾ ಕ್ರಸ್ಟ್ ಗೇಟ್ಗಳ ಅಳವಡಿಕೆ ಕಾರ್ಯ ಏಪ್ರಿಲ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ಶುಕ್ರವಾರ ತುಂಗಭದ್ರಾ ಜಲಾಶಯ ಸ್ಥಳಕ್ಕೆ ತೆರಳಿ ಗೇಟ್ ಅಳವಡಿಕೆ ಕಾರ್ಯ ವೀಕ್ಷಿಸಿದ ನಂತರ ಪಟ್ಟಣಕ್ಕೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಪ್ರಸ್ತುತ 18 ಗೇಟ್ಗಳ ಅಳವಡಿಕೆ ಕಾರ್ಯ ಸಂಪೂರ್ಣವಾಗಿ ಮುಗಿದಿದೆ. ಶುಕ್ರವಾರ 5 ಗೇಟ್ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿತ್ತು. ಮಾರ್ಚ್ ತಿಂಗಳ ಅಂತ್ಯಕ್ಕೆ 23 ಗೇಟ್ಗಳ ಅಳವಡಿಕೆ ಮುಗಿಯಲಿದೆ. ಏಪ್ರಿಲ್ ತಿಂಗಳಲ್ಲಿ ಇನ್ನೂ 10 ಗೇಟ್ಗಳ ಕಾರ್ಯ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು.

‘ರಾಯಚೂರು ಜಿಲ್ಲೆಗೆ ಕುಡಿಯುವ ನೀರ ಪೂರೈಕೆಗಾಗಿ ತುಂಗಭದ್ರಾ ಮುಖ್ಯ ನಾಲೆಯ ಮೂಲಕ ನೀರು ಹರಿಸುವ ಸಂದರ್ಭದಲ್ಲಿ ಬಸಾಪುರ ಗ್ರಾಮದ ಬಳಿ 13ನೇ ಮೈಲ್ ನಲ್ಲಿ ಕಾಲುವೆ ಒಡೆದಿರುವುದನ್ನು ವೀಕ್ಷಿಸಲಾಗಿದೆ. ಆದಷ್ಟು ಬೇಗ ಕಾಲುವೆ ದುರಸ್ತಿ ಕೆಲಸವನ್ನು ಮುಗಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಸೈಯದ್ ಖಾಲೀದ್ ಖಾದ್ರಿ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.