ಮಾನ್ವಿ: ಪಟ್ಟಣದ ವಿವಿಧ ವಾರ್ಡ್ಗಳಿಗೆ ಕುಡಿಯುವ ನೀರಿನ ಅಸಮರ್ಪಕ ಸರಬರಾಜು ವಿರೋಧಿಸಿ ಸಾರ್ವಜನಿಕರು ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಮುಂದೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆಯಿತು.

ಪಟ್ಟಣದ ನಮಾಜಗೇರಿ ಗುಡ್ಡದ ಕುಡಿಯುವ ನೀರಿನ ಟ್ಯಾಂಕ್ಗೆ ತೆರಳಿದ ಸಾರ್ವಜನಿಕರು ಕುಡಿಯುವ ನೀರು ಸರಬರಾಜು ನಿರ್ವಹಣೆ ಮಾಡುವ ಪುರಸಭೆ ಸಿಬ್ಬಂದಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕುಡಿಯುವ ನೀರು ಪೂರೈಸದ ಪೈಪ್ಲೈನ್ ಧ್ವಂಸಗೊಳಿಸುವ ಎಚ್ಚರಿಕೆ ನೀಡಿದರು. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಪುರಸಭೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಭೆ ಶೀಘ್ರ ಕರೆದು ಚರ್ಚಿಸಲಾಗುವುದು. ಕುಡಿಯುವ ನೀರು ಪೂರೈಸುವಲ್ಲಿ ಲೋಪ ಎಸಗಿರುವ ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-32-1888406120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.