ಶನಿವಾರ, ಜನವರಿ 18, 2020
20 °C
ಜಿಲ್ಲಾ ಪೊಲೀಸರಿಂದ ವ್ಯಾಪಕ ಬಂದೋಬಸ್ತ್‌ ವ್ಯವಸ್ಥೆ

ರಾಯಚೂರು: ಭಾರತ್‌ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟಗಳಿಂದ ಜಂಟಿಯಾಗಿ ಕರೆ ನೀಡಿರುವ ‘ಜನವರಿ 8 ಭಾರತ ಬಂದ್‌’ಗೆ ಜಿಲ್ಲೆಯ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ವಿವಿಧ ಪ್ರಗತಿಪರ ಸಂಘಟನೆಗಳು ಸೇರಿದಂತೆ ಯುನಿಯನ್‌ ಸೆಂಟರ್‌ ಅಫ್ ಇಂಡಿಯಾ, ಕರ್ನಾಟಕ ಜಾಗೃತ ರೈತ ಸಂಘ, ಕರ್ನಾಟಕ ಯುವಜನ ರಂಗದ ಸದಸ್ಯರು ಮುಷ್ಕರದಲ್ಲಿ ಭಾಗವಹಿಸಲಿವೆ.

ಜನವರಿ 8 ರ ಬಂದ್‌ ಸ್ವಯಂಪ್ರೇರಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಬೆಂಬಲ ನೀಡುವಂತೆ ಸಂಚಾರಿ ಆಟೋದಲ್ಲಿ ಧ್ವನಿವರ್ಧಕದ ಮೂಲಕ ಮಂಗಳವಾರ ಕಾರ್ಮಿಕ ಸಂಘಟನೆಗಳ ಪರವಾಗಿ ಮನವಿ ಮಾಡಿಕೊಳ್ಳುತ್ತಿರುವುದು ಕಂಡುಬಂತು.

ಬಂದೋಬಸ್ತ್‌ ವ್ಯವಸ್ಥೆ

ಭಾರತ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್‌ ಹಾಗೂ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮೂರು ಕೆಎಸ್‌ಆರ್‌ಪಿ, 10 ಡಿಎಆರ್‌, 500 ಕಾನ್‌ಸ್ಟೆಬಲ್ ಗಳು, 40 ಪಿಎಸ್‌ಐಗಳು,20 ಸಿಪಿಐಗಳು, 4 ಡಿವೈಎಸ್‌ಪಿಗಳು ಹಾಗೂ ಇಬ್ಬರು ಎಸ್‌ಪಿ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್‌  ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಬಂದ್ ಸಮಯದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವ ಪ್ರಕರಣ ನೆಡದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಸ್ತೆ ಮೇಲೆ ಟೈರ್ ಗಳನ್ನು ಸುಟ್ಟು ಸಂಚಾರಕ್ಕೆ ಅಡ್ಡಿ ಪಡಿಸುವುದು ಮಾಡಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾದ್ಯಾಂತ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಅನುಮಾನಾಸ್ಪದ ವಾಹನಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು