ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾರಿಕಾಂಭಾ ದೇವಿ ಧ್ವನಿ ಸುರುಳಿ ಬಿಡುಗಡೆ

Published 19 ಜೂನ್ 2024, 15:39 IST
Last Updated 19 ಜೂನ್ 2024, 15:39 IST
ಅಕ್ಷರ ಗಾತ್ರ

ರಾಯಚೂರು: ಮಾರಿಕಾಂಭಾ ದೇವಿ ದೇವಸ್ಥಾನದ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ರಾಯಚೂರು ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿ ನಡೆಯಿತು.

ನಾಲವಾರದ ಸಿದ್ಧತೋಟೇಂದ್ರ ಶಿವಾಚಾರ್ಯರು, ಕಿಲ್ಲೇಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರು, ಚೇಗುಂಟ ಶ್ರೀಮಠದ ಕ್ಷೀರಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಸವಾರೆಪ್ಪ, ಜಂಬಣ್ಣ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಮೊದಲು ಸರ್ವ ಶ್ರೀಗಳನ್ನು ಕುಂಭ ಕಳಸ ಡೊಳ್ಳು ಬಾಜಾ ಭಜಂತ್ರಿಗಳೊಂದಿಗೆ ಮೆರೆವಣಿಗೆಯ ಮೂಲಕ ದೇವಸ್ಥಾನಕ್ಕೆ ಕರೆ ತರಲಾಯಿತು.

ಅಂತರರಾಷ್ಠ್ರೀಯ ಕ್ಲಾರಿಯೋನೆಟ್ ವಾದಕ ಪಂಡಿತ ನರಸಿಂಹಲು ವಡವಾಟಿ, ವಡವಾಟಿ ಶಾರದಾ ಭರತ, ಹಿರಿಯ ಸಾಹಿತಿ ಅಯ್ಯಪ್ಪಯ್ಯ ಹುಡಾ, ಕಲಾವಿದ ಕೊಪ್ರೇಶ ದೇಸಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹುಸೇನಪ್ಪ, ಮಹೇಶ್ವರಿ ಗಚ್ಚಿನಮನೆ, ಮಲ್ಲಪ್ಪ ಬಾಗಿಲು, ಗಂಗಣ್ಣ ನಾಯಕ, ದೇವಸ್ಥಾನದ ಸೇವಾ ಸಮಿತಿ ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT