ಮಸ್ಕಿ: ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೆಲಸ ಮಾಡಿಸಿಕೊಂಡು ಈಗ ಕೂಲಿ ಪಾವತಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಪಾಪನಕೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪದೂರ ಗ್ರಾಮದ ಕೂಲಿ ಕಾರ್ಮಿಕರು ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಶುಕ್ರವಾರ ಧರಣಿ ನಡೆಸಿದರು.
‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೂಚನೆ ಮೇರೆಗೆ 300ಕ್ಕೂ ಹೆಚ್ಚು ಕೂಲಿ ಕಾರ್ಮಿಕರು 13 ದಿನಗಳ ಕೆಲಸ ಮಾಡಿ ಗ್ರಾಮದ ಹೂಳು ತೆಗೆದು ಹಾಕಿದ್ದೇವೆ. ಆದರೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎನ್.ಎಂ.ಎಸ್ ಮಾಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಹಾರಿಕೆ ಉತ್ತರ ನೀಡುತ್ತಿದ್ದಾರೆ
ಎಂದು ಧರಣಿ ನಿರತರು ಆರೋಪಿಸಿದರು.
‘ಮಾಡಿದ ಕೆಲಸಕ್ಕೆ ನಮಗೆ ಕೂಡಲೇ ಕೂಲಿ ಹಣ ಪಾವತಿಸದಿದ್ದರೆ ನಾವು ಪಾಮನಕೆಲ್ಲೂರು ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಈ ಸಂಬಂಧ ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು. ಅನೇಕ ಕೂಲಿ ಕಾರ್ಮಿಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.