ಮಸ್ಕಿ: ‘35 ವರ್ಷಗಳ ನಂತರ ಸ್ವತಂತ್ರ ಮಾರುಕಟ್ಟೆಯಾಗಿ ಪರಿವರ್ತನೆಗೊಂಡಿರುವ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಅಭಿವೃದ್ಧಿಗೆ ನೂತನ ಆಡಳಿತ ಮಂಡಳಿ ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ಬುಧವಾರ ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,‘ಮಾರುಕಟ್ಟೆ ವ್ಯವಸ್ಥೆ ರೈತರ ಆರ್ಥಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು’ ಎಂದರು.

‘ರೈತರಿಗೆ ಉತ್ತಮ ಬೆಲೆ ಸಿಗುವಂತೆ ಪಾರದರ್ಶಕ ವಹಿವಾಟು ವ್ಯವಸ್ಥೆ ಜಾರಿಗೆ ತರಬೇಕು’ ಎಂದು ಸೂಚಿಸಿದರು.

‘ಮಾರುಕಟ್ಟೆಯಲ್ಲಿ ಶೆಡ್, ಕುಡಿಯುವ ನೀರು, ತೂಕ ಮಾಪನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳಬೇಕು. ರೈತರು ತೊಂದರೆ ಅನುಭವಿಸದಂತೆ ಅಧಿಕಾರಿಗಳು ಕಾಳಜಿ ವಹಿಸಬೇಕು’ ಎಂದು ಹೇಳಿದರು.

‘ಮಾರುಕಟ್ಟೆಯಲ್ಲಿ ಇನ್ನೂ ವ್ಯಾಪಾರ ಆರಂಭಿಸದ ವರ್ತಕರಿಗೆ ಕೂಡಲೇ ನೋಟಿಸ್ ನೀಡಿ ವ್ಯಾಪಾರ ಆರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಮಸ್ಕಿ ಮಾರುಕಟ್ಟೆಯನ್ನು ಸ್ವತಂತ್ರ ಮಾರುಕಟ್ಟೆಯನ್ನಾಗಿಸಲು ಕಾರಣಿಕರ್ತರಾದ ಶಾಸಕ ತುರ್ವಿಹಾಳ ಅವರನ್ನು ನೂತನ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಎಪಿಎಂಸಿ ಅಧ್ಯಕ್ಷ ಸಿದ್ದನಗೌಡ ಮಾಟೂರು, ಉಪಾಧ್ಯಕ್ಷ ನಿಂಗಯ್ಯ ಮಲ್ಲದಗುಡ್ಡ, ಸದಸ್ಯರಾದ ಪೂರ್ಣಿಮಾ ವೀರೇಶ ಪಾಟೀಲ, ಕುಸುಮ ಬಲವಂತರಾಯ ಪಾಟೀಲ, ಮಲ್ಲರೆಡ್ಡೆಪ್ಪ ಹಾಗೂ ಕಾರ್ಯದರ್ಶಿ ಇಸ್ಮಾಯಿಲ್ ಬಾಳನವರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-32-646690490

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.