ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಅವರ ಜಯಂತಿಯನ್ನು ಏಪ್ರಿಲ್ 14ರಂದು ವಿಜೃಂಭಣೆಯಿಂದ ಆಚರಿಸಲು ತಯಾರಿ ನಡೆಯುತ್ತಿದ್ದು, ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದು ತಹಶೀಲ್ದಾರ್ ಮಂಜುನಾಥ ಬೋಗಾವತಿ ಹೇಳಿದರು.

ಪಟ್ಟಣದ ಬಸವೇಶ್ವರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ನಗರದ ಡಾ. ಅಂಬೇಡ್ಕರ್ ಉದ್ಯಾನದಿಂದ ಇಬ್ಬರೂ ಮಹನೀಯರ ಭಾವಚಿತ್ರಗಳೊಂದಿಗೆ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಲಿದೆ ಎಂದು ತಿಳಿಸಿದರು.

ಭ್ರಮರಾಂಬ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಂಸದರು, ಶಾಸಕರು, ಪುರಸಭೆ ಅಧ್ಯಕ್ಷರು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಸೇರಿದಂತೆ ಅನೇಕ ಗಣ್ಯರು ಹಾಗೂ ಚಿಂತಕರು ಭಾಗವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್, ಪಿಎಸ್ಐ ಕೆ. ರಂಗಯ್ಯ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರವೀಂದ್ರ ಉಪ್ಪಾರ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-32-694230982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.