ಶುಕ್ರವಾರ, ಡಿಸೆಂಬರ್ 4, 2020
22 °C

ಮಸ್ಕಿ ಉಸ್ತುವಾರಿ: ವಿಜಯೇಂದ್ರಗೆ ಮನವಿ– ಪ್ರತಾಪಗೌಡ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರತಾಪಗೌಡ ಪಾಟೀಲ

ರಾಯಚೂರು: ‘ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯ ಉಸ್ತುವಾರಿಯನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೇ ವಹಿಸಬೇಕು’ ಎಂದು ಬಿಜೆಪಿಯಿಂದ ಸ್ಪರ್ಧಿಸಲಿರುವ ಪ್ರತಾಪಗೌಡ ಪಾಟೀಲ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

‘ಈ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ನಿರ್ಧರಿಸುತ್ತಿದ್ದು, ಅವರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಭರವಸೆ
ನೀಡಿದ್ದಾರೆ. ಬಿ.ವೈ.ವಿಜಯೇಂದ್ರ ಅವರನ್ನು ಭೇಟಿ ಮಾಡಿ ಆಹ್ವಾನಿಸಿದಾಗ, ಅವರೂ ಇದೇ ಮಾತು ಹೇಳಿದ್ದಾರೆ. ಒಂದು ವೇಳೆ ಬಸವಕಲ್ಯಾಣದ ಜವಾಬ್ದಾರಿ ವಹಿಸಿದರೂ ಮಸ್ಕಿ ಕ್ಷೇತ್ರದಲ್ಲಿಯೂ ಕೆಲ ದಿನ ಪ್ರವಾಸ ಮಾಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಪ್ರತಾಪಗೌಡ ಪಾಟೀಲ ಅವರು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು