ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಮನವಿ

Last Updated 9 ಏಪ್ರಿಲ್ 2021, 15:00 IST
ಅಕ್ಷರ ಗಾತ್ರ

ಮುದಗಲ್: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಅಂಗೀಕರಿಸಿ ಯಥಾವತ್ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ನ್ಯಾಯಮೂರ್ತಿ ಎ.ಜೆ.ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಹಲವು ಹೋರಾಟ, ಪ್ರತಿಭಟನೆಗಳು ನಡೆದರೂ ಸರ್ಕಾರ ನಿರ್ಲಕ್ಷಿಸುತ್ತಿವೆ. ಕೂಡಲೇ ವರದಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

‘ರಾಜ್ಯದ ಶಾಸನ ಸಭೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರವಿದೆ‘ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಮುಂದಿನ ಅಧೀವೇಶನದಲ್ಲಿ ವರದಿ ಅಂಗೀಕರಿಸಿ ಒಳ ಮೀಸಲಾತಿ ಜಾರಿಗೊಳಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಸರ್ಕಾರದ ವಿರುದ್ಧ ಚಳವಳಿ ಮಾಡಬೇಕಾಗುತ್ತದೆ ಎಂದರು.

ದಲಿತ ಸಂಘಟನೆ ಪದಾಧಿಕಾರಿಗಳಾದ ಶರಣಪ್ಪ ಕಟ್ಟಿಮನಿ , ಬಸವರಾಜ ಬಂಕದಮನಿ , ನಿರುಪಾದಿ ರೇವಣಕಿ ,ಲಕ್ಕಪ್ಪ ನಾಗರಹಾಳ , ಪರಶುರಾಮ ರಾಮತ್ನಾಳ, ಮೋಹನ ಭಂಡಾರಿ , ಸಂತೋಷ ಪೂಜಾರಿ , ಹುಲ್ಲೇಶ ಕಟ್ಟಿಮನಿ , ಕುಲದೀಪ ಕಟ್ಟಿಮನಿ , ಆನಂದ ವಂದಾಲಿ , ಶಶಿ ಆದಾಪುರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT