ಶುಕ್ರವಾರ, ಮೇ 14, 2021
29 °C

ಹಣ ಹಂಚಿಕೆ ಪ್ರಕರಣ: ಕ್ರಮಕ್ಕೆ ಕೆಆರ್‌ಎಸ್ ಪಕ್ಷ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ಹಾಕುವಂತೆ ಪಕ್ಷದ ಕಾರ್ಯಕರ್ತರು ಮಹಿಳೆಯರಿಗೆ ಹಣ ಹಂಚುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರೂ ಸಹ ಚುನಾವಣಾ ಆಯೋಗ ಕಣ್ಣು ಮಚ್ಚಿಕುಳಿತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಶುಕ್ರವಾರ ಚುನಾವಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಬೇರೆ ಬೇರೆ ಜಿಲ್ಲೆಗಳಿಂದ ಬಂದ ಬಿಜೆಪಿ ಕಾರ್ಯಕರ್ತರು ಮಹಿಳಾ ಮತದಾರರಿಗೆ ಹಣ ಹಂಚಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡುವಂತೆ ಮನವಿ ಮಾಡುತ್ತಿರುವ ದೃಶ್ಯ ಕಳೇದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾದ್ಯಮಗಳಲ್ಲಿ ಸುದ್ದಿಯಾಗಿದೆ. ಆದರೆ, ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಇದನ್ನು ನೋಡಿಯೋ ನೋಡದಂತೆ ಕಣ್ಣು ಮುಚ್ಚಿಕುಳಿತಿಕೊಂಡು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರು.

ಕೂಡಲೇ ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು, ಮತದಾರರಿಗೆ ಹಣ ಹಂಚಿದ ವ್ಯಕ್ತಿಗಳನ್ನು ಗುರುತಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಚುನಾವಣಾಧಿಕಾರಿ ರಾಜಶೇಖರ ಡಂಬಳ ಅವರಿಗೆ ಮನವಿ ಸಲ್ಲಿಸಿದರು.

ಪಕ್ಷದ ಮುಖಂಡ ಮಂಜೇಗೌಡ, ಲಿಂಗೇಗೌಡ ಸೇರಿದಂತೆ ಅನೇಕ ಮುಖಂಡರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು