ಮಸ್ಕಿ: ಸರ್ಕಾರದ ಮಹತ್ವಾಕಾಂಕ್ಷೆಯ ‘ಭೂಸುರಕ್ಷಾ’ ಯೋಜನೆಯಡಿ ತಾಲ್ಲೂಕಿನ ಕಂದಾಯ ಇಲಾಖೆಯ ಮಹತ್ವದ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ ಬೋಗಾವತಿ ತಿಳಿಸಿದ್ದಾರೆ.

ದಾಖಲೆಗಳ ಡಿಜಿಟಲೀಕರಣದಿಂದ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ. ಜಮೀನು ಹಾಗೂ ಕಂದಾಯ ಸಂಬಂಧಿತ ದಾಖಲೆಗಳನ್ನು ಮನೆಯಲ್ಲಿಯೇ ಕುಳಿತು ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

‘ಭೂ ದಾಖಲೆಗಳ ಸುರಕ್ಷತೆ, ಸಂರಕ್ಷಣೆ ಹಾಗೂ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಈಗಾಗಲೇ ತಾಲ್ಲೂಕಿನ ಹಲವು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗಿದೆ. ಸಾರ್ವಜನಿಕರು ತಮ್ಮ ಅಗತ್ಯ ದಾಖಲೆಗಳನ್ನು ಆನ್ಲೈನ್ ಮೂಲಕ ಪಡೆಯಬಹುದಾಗಿದ್ದು, ಕಚೇರಿಗಳಲ್ಲಿನ ಅನಗತ್ಯ ವಿಳಂಬ ಮತ್ತು ದಾಖಲೆ ಕಳೆದು ಹೋಗುವ ಸಮಸ್ಯೆ ತಪ್ಪಲಿದೆ’ ಎಂದು ತಿಳಿಸಿದ್ದಾರೆ. ಮಾಹಿತಿಗಾಗಿ ವೆಬ್ಸೈಟ್ recordroom.karnataka.gov.in ಗೆ ಭೇಟಿ ನೀಡಬಹುದು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-32-1807473913

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.