ಮಸ್ಕಿ: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳೆಯ ಬಸ್ ನಿಲ್ದಾಣದಲ್ಲಿ ಬಸ್ಗಳಿಗಾಗಿ ಕಾಯುವ ಪ್ರಯಾಣಿಕರಿಗಾಗಿ ಪುರಸಭೆ ವಿನೂತನ ಕ್ರಮ ಕೈಗೊಂಡಿದೆ. ಪ್ರಯಾಣಿಕರು, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಬಿಸಿಲಿನ ರಕ್ಷಣೆ ಪಡೆಯಲು ಬಿದಿರಿನ ತಟ್ಟೆಗಳಿಂದ ಬಸ್ ನಿಲುಗಡೆ ಸ್ಥಳದಲ್ಲಿ ತಾತ್ಕಾಲಿಕ ತಂಗುದಾಣಗಳನ್ನು ನಿರ್ಮಿಸಿದೆ.

ಮಧ್ಯಾಹ್ನದ ಹೊತ್ತಿನಲ್ಲಿ ಉರಿಯುವ ಬಿಸಿಲಿನಿಂದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಹಳೆಯ ಬಸ್ ನಿಲ್ದಾಣದಲ್ಲಿ ತಂಗುದಾಣದ ಕೊರತೆಯಿಂದ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ವೃದ್ಧರು ಸುಡುವ ಬಿಸಿಲಿನಲ್ಲೇ ಪಾದಚಾರಿ ರಸ್ತೆಯ ಮೇಲೆ ನಿಂತು ಬಸ್ಗಳಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸಮಸ್ಯೆಯನ್ನು ಮನಗಂಡ ಪುರಸಭೆ ತಕ್ಷಣ ಕ್ರಮಕ್ಕೆ ಮುಂದಾಗಿದೆ. ಪ್ರಯಾಣಿಕರಿಗೆ ಕನಿಷ್ಠ ಮಟ್ಟದ ನೆರಳಿನ ಆಶ್ರಯ ಒದಗಿಸುವ ಉದ್ದೇಶದಿಂದ ಹಳೆಯ ಬಸ್ ನಿಲ್ದಾಣದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸುವ ಮೂಲಕ ಬಿಸಿಲಿನ ಧಗೆಯಿಂದ ಜನರನ್ನು ರಕ್ಷಿಸಲು ಮುಂದಾಗಿದೆ. ಈ ವ್ಯವಸ್ಥೆ ಬಿಸಿಲಿನ ತೀವ್ರತೆಯಿಂದ ಬಳಲುತ್ತಿದ್ದ ಜನರಿಗೆ ಸ್ವಲ್ಪ ಮಟ್ಟಿನ ನಿರಾಳತೆ ತಂದಿದೆ. ಪುರಸಭೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ಥಳೀಯರು, ‘ತಾತ್ಕಾಲಿಕ ತಟ್ಟೆಯ ಶೆಡ್ಗಳ ಜೊತೆಗೆ ಪಾದಚಾರಿ ರಸ್ತೆ ಮೇಲೆ ಕುಳಿತುಕೊಳ್ಳಲು ಬೆಂಚ್ಗಳನ್ನು ಹಾಕಿದರೆ ಜನರು ಗಂಟೆ ಗಟ್ಟಲೆ ನಿಲ್ಲುವುದು ತಪ್ಪುತ್ತದೆ, ಪುರಸಭೆ ಈ ಬಗ್ಗೆ ಕ್ರಮ ಕೈಗೊಳ್ಳಲಿ’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-32-122157257

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.