ಬುಧವಾರ, ಜೂನ್ 23, 2021
30 °C

ಮಸ್ಕಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ (ರಾಯಚೂರು): ಮಸ್ಕಿ ಉಪಚುನಾವಣೆ ಕಣದಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಸೋಮವಾರ ಒಂದೇ ದಿನ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಈ ಮೊದಲು ಇಬ್ಬರೂ ನಾಮಪತ್ರ ಸಲ್ಲಿಸಿದ್ದು ಈಗ ಅಧಿಕೃತವಾಗಿ ಬಿ ಫಾರಂ ನೊಂದಿಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಎರಡೂ ಪಕ್ಷಗಳಿಂದ ಸಭೆಗಳನ್ನು ಆಯೋಜಿಸಲಾಗಿದೆ. ಪಕ್ಷದ ಕಚೇರಿ ಪಕ್ಕದಲ್ಲಿಯೇ ಬಿಜೆಪಿ ಸಭೆ ನಡೆಯಲಿದ್ದು, ಸಚಿವ ಶ್ರೀರಾಮುಲು, ಎನ್.ರವಿಕುಮಾರ್, ಬಿ.ವೈ.ವಿಜಯೇಂದ್ರ, ಶಾಸಕರಾದ ರಾಜುಗೌಡ, ಡಾ.ಶಿವರಾಜ ಪಾಟೀಲ ಪಾಲ್ಗೊಳ್ಳುವರು.

ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ.ಶಿವಕುಮಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ ಸೇರಿದಂತೆ ನೆರೆಯ ಜಿಲ್ಲೆಗಳ ಪಕ್ಷದ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಅವರಿಗೆ ನಾಮಪತ್ರ ಸಲ್ಲಿಸುವಾಗ ಜೊತೆಯಾಗುವರು.

ಕನಕದಾಸ ವೃತ್ತದಿಂದ ಕಾಂಗ್ರೆಸ್ ರ‍್ಯಾಲಿ ನಡೆಯಲಿದೆ. ನಂತರ ಬಹಿರಂಗ ಸಭೆ ಆಯೋಜಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು