ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Maski Bypoll: ಕಾಂಗ್ರೆಸ್ ಅಭ್ಯರ್ಥಿ ಪರ ಎಚ್.ಕೆ.ಪಾಟೀಲ್, ರಾಯರೆಡ್ಡಿ ಪ್ರಚಾರ

Last Updated 8 ಏಪ್ರಿಲ್ 2021, 12:35 IST
ಅಕ್ಷರ ಗಾತ್ರ

ಸಿಂಧನೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾರಣ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ ಅವರ ಪರವಾಗಿ ಮಾಜಿ ಸಚಿವರಾದ ಎಚ್.ಕೆ.ಪಾಟೀಲ್ ಹಾಗೂ ಬಸವರಾಜ ರಾಯರೆಡ್ಡಿ ಅವರು ಗುರುವಾರ ತಾಲ್ಲೂಕಿನ ಬಳಗಾನೂರು, ಗುಡದೂರು ಮತ್ತು ಕೋಳಬಾಳ ಗ್ರಾಮಗಳಲ್ಲಿ ಪ್ರಚಾರ ಸಭೆ ನಡೆಸಿ ಮತಯಾಚನೆ ಮಾಡಿದರು.

ತಾಲ್ಲೂಕಿನ ಕೋಳಬಾಳ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ವಿದೇಶದಿಂದ ಕಪ್ಪುಹಣ ತಂದಿಲ್ಲ. ₹ 15 ಲಕ್ಷ ಹಣ ಜನ್‍ಧನ್ ಖಾತೆಗೆ ಹಾಕಿಲ್ಲ. ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸಿಲ್ಲ. ಸ್ವಾಮಿನಾಥನ್ ವರದಿ ಜಾರಿಗೊಳಿಸಿಲ್ಲ. ಮೂರು ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಲಕ್ಷಾಂತರ ರೈತರು ನಾಲ್ಕು ತಿಂಗಳಿಂದ ಹೋರಾಟ ನಡೆಸುತ್ತಿದ್ದರೂ ಸೌಜನ್ಯಕ್ಕಾದರೂ ಅವರ ಬಳಿ ಹೋಗಿಲ್ಲ. ಆದರೆ ಅಂಬಾನಿ ಮೊಮ್ಮಗನ ಜನ್ಮದಿನದ ಕಾರ್ಯಕ್ರಮಕ್ಕಾಗಿ ದೆಹಲಿಯಿಂದ ಮುಂಬೈಗೆ ಬರಲು ಸಮಯವಿದೆ. ಬಂಡವಾಳಶಾಹಿಗಳು ಆಡಿಸಿದಂತೆ ಆಡುವ ಪ್ರಧಾನಿ ಸಿಕ್ಕಿರುವುದು ದುರದೃಷ್ಟಕರ ಎಂದು ಟೀಕಿಸಿದರು.

ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿ, ‘ಕೇಂದ್ರದಲ್ಲಿ ಪ್ರಧಾನಿ ಮೋದಿ, ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ದುರಾಡಳಿತದಲ್ಲಿ ಮುಳುಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ಒಡೆದಾಳುವ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ. ಆದ್ದರಿಂದ ಹಣಕ್ಕಾಗಿ ಮಾರಾಟವಾಗಿರುವ ಪ್ರತಾಪಗೌಡ ಪಾಟೀಲ್‍ಗೆ ತಕ್ಕ ಪಾಠ ಕಲಿಸಲು ಆರ್.ಬಸನಗೌಡರನ್ನು ಗೆಲ್ಲಿಸಬೇಕು’ ಎಂದರು.

ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ಎಸ್.ಜಿ.ನಂಜುಂಡಯ್ಯಮಠ್ ಮಾತನಾಡಿದರು.

ಯುವ ಕಾಂಗ್ರೆಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ, ಮುಖಂಡರಾದ ಬಸವರಾಜ ಪಾಟೀಲ್ ಇಟಗಿ, ಹನುಮಂತಪ್ಪ ಮುದ್ದಾಪುರ, ನಿರುಪಾದೆಪ್ಪ ಗುಡಿಹಾಳ ವಕೀಲ, ಲಿಂಗರಾಜ ಪಾಟೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT