ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಪಾಲಿಟೆಕ್ನಿಕ್‌ ಕಾಲೇಜಿಗೆ ತಟ್ಟಿದ ನೀತಿ ಸಂಹಿತೆ ಬಿಸಿ

Published 17 ಮಾರ್ಚ್ 2024, 12:27 IST
Last Updated 17 ಮಾರ್ಚ್ 2024, 12:27 IST
ಅಕ್ಷರ ಗಾತ್ರ

ಮಸ್ಕಿ: ಪಟ್ಟಣದ ಮುದಗಲ್‌ ರಸ್ತೆಯಲ್ಲಿರುವ ಪ್ರತಾಪಗೌಡ ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ನಾಮಫಲಕಕ್ಕೂ ಚುನಾವಣೆ ನೀತಿ ಸಂಹಿತೆಯ ಬಿಸಿ ತಟ್ಟಿದೆ.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಭಾನುವಾರ ಪುರಸಭೆ ಸಿಬ್ಬಂದಿ ಕಾಲೇಜಿಗೆ ತೆರಳಿ ಕಾಲೇಜಿನ ಮುಂಭಾಗದಲ್ಲಿ ಬರೆಸಲಾಗಿದ್ದ ಪ್ರತಾಪಗೌಡ ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ನಾಮ ಫಲಕದಲ್ಲಿ ಪ್ರತಾಪಗೌಡ ಪಾಟೀಲ ಎಂಬ ಹೆಸರಿಗೆ ಜೆಸಿಬಿ ಯಂತ್ರದ ಮೇಲೆ ನಿಂತು ಸ್ಟಿಕ್ಕರ್‌ ಅಂಟಿಸಿದರು.

ಪ್ರತಾಪಗೌಡ ಪಾಟೀಲ ಶಾಸಕರಾಗಿದ್ದ ಸಂದರ್ಭದಲ್ಲಿ ಮುದಗಲ್‌ ರಸ್ತೆಯ ಪಕ್ಕದಲ್ಲಿರುವ 5 ಎಕರೆ ಜಮೀನನ್ನು ಸರ್ಕಾರಕ್ಕೆ ದೇಣಿಗೆಯಾಗಿ ನೀಡಿದ್ದರು. ಸರ್ಕಾರವು ಪ್ರತಾಪಗೌಡ ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಎಂದು ನಾಮಕರಣ ಮಾಡಿ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT