ಮಸ್ಕಿ: ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟಲು ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಹರಿಸಲಾಗಿದೆ.

ಮಸ್ಕಿ ಪಟ್ಟಣದ ಮೈಲ್ 69ರ ಬಳಿ ಮಾ.17ರ ರಾತ್ರಿ ನೀರು ಕಾಲುವೆಗೆ ಹರಿದುಬಂದಿದೆ.

ಪಟ್ಟಣದ ಕುಡಿಯುವ ನೀರಿನ ಕೆರೆಗಳನ್ನು ಭರ್ತಿ ಮಾಡಲು ಪುರಸಭೆ ತಕ್ಷಣ ಕ್ರಮ ಕೈಗೊಂಡಿದ್ದು, ಕಾಲುವೆ ಪಕ್ಕದಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ಇದಕ್ಕಾಗಿ 10 ಎಚ್.ಪಿ ಸಾಮರ್ಥ್ಯದ 9 ಮೋಟಾರ್ಗಳನ್ನು ಅಳವಡಿಸಲಾಗಿದ್ದು, ಅವುಗಳ ಮೂಲಕ ನಿರಂತರವಾಗಿ ನೀರು ಎತ್ತಿ ಕೆರೆಗಳಿಗೆ ಹರಿಸಲಾಗುತ್ತಿದೆ.

ಈ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಪುರಸಭೆ ಸಿಬ್ಬಂದಿ ದಿನದ 24 ಗಂಟೆಗಳ ಕಾಲ ಶ್ರಮಿಸುತ್ತಿದ್ದು, ಬೇಸಿಗೆ ತೀವ್ರವಾಗುವ ಮೊದಲು ಸಾಕಷ್ಟು ನೀರು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಪುರಸಭೆ ಅಧ್ಯಕ್ಷ ಸುರೇಶ ಹರಸೂರು ‘ಪ್ರಜಾವಾಣಿ’ಗೆ ತಿಳಿಸಿದರು.

ಬುಧವಾರ ಬೆಳಿಗ್ಗೆ ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ಮುಖ್ಯಾಧಿಕಾರಿ ನರಸರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆ ಪರಿಶೀಲಿಸಿದರು. ಅಲ್ಲದೆ, ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಒಂದು ವಾರದಲ್ಲಿ ಪಟ್ಟಣದ ಎರಡೂ ಕೆರೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-32-1341019546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.