ಮುದಗಲ್ (ರಾಯಚೂರು ಜಿಲ್ಲೆ): ’ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರಕ್ಕಾಗಿ ಪ್ರತಿ ಗ್ರಾಮಗಳಲ್ಲಿ ಕಾರ್ಯಕರ್ತರು ನೀಡಿದ್ದ ದೇಣಿಗೆಯ ಬಗ್ಗೆ ಯಾರೂ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ. ಅಗತ್ಯವಿದ್ದರೆ, ಆ ಗ್ರಾಮಗಳಿಗೆ ಹೋಗಿ ಪರಿಶೀಲನೆ ಮಾಡಲಿ. ಈ ವಿಷಯದಲ್ಲಿ ದೇವರ ಮುಂದೆ ಪ್ರಮಾಣ ಮಾಡಲೂ ಸಿದ್ಧ‘ ಎಂದು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಯಮನೂರಪ್ಪ ಉರುಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಪತ್ರಕರ್ತರ ಬಳಿ ಅವರು ಮಾತನಾಡಿದರು.

‘ಬಿಜೆಪಿ ಅಭ್ಯರ್ಥಿ ಸೋಲಿನ ಭಯದಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮಸ್ಕಿ ಕ್ಷೇತ್ರದ ಜನರು ಇದೆಲ್ಲವನ್ನೂ ನೋಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ಬಂದ ಜನಪರ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ ಆಗಲಿವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.