ಮಸ್ಕಿ (ರಾಯಚೂರು): ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರ ಬಗ್ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾಧಿಕಾರಿ ರಾಜಶೇಖರ ಡಂಬಳ ಅವರಿಗೆ ಬಿಜೆಪಿಯ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್.ಎಸ್. ಮಿಟ್ಟಿಲಕೋಡ ಶನಿವಾರ ದೂರು ಸಲ್ಲಿಸಿದರು.

ಸಿದ್ದರಾಮಯ್ಯ ಅವರು ಬಹಿರಂಗ ಸಭೆಗಳಲ್ಲಿ ಪ್ರತಾಪಗೌಡ ಪಾಟೀಲ ಅವರಿಗೆ ’ಕಳ್ಳ‘ ಎಂಬ ಶಬ್ದ ಬಳಕೆ ಮಾಡುವ ಮೂಲಕ ಅವಹೇಳನ ಮಾಡಿದ್ದಾರೆ. ಕೆಪಿಸಿಸಿ ಸದಸ್ಯ ಶರಣಗೌಡ ಬಯ್ಯಾಪೂರ ಅವರು ತಮ್ಮ ಭಾಷಣದಲ್ಲಿ ಆರ್.ಬಸನಗೌಡ ಅವರಿಗೆ ಮತ ಹಾಕಿದರೆ ₹ 50 ಸಾವಿರ ಕೊಡುವುದಾಗಿ ಆಮಿಷ ಒಡ್ಡಿದ್ದಾರೆ. ಇದರ ಜತೆಗೆ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತಮ್ಮ ಪ್ರಚಾರದ ಸಭೆಗಳಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.