ಮಸ್ಕಿ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮೂರು ಬಹಿರಂಗ ಸಭೆಗಳನ್ನು ಹಾಗೂ 25 ಸಮುದಾಯಗಳ ಸಭೆಯನ್ನು ನಡೆಸುವ ಮೂಲಕ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರ ಪರವಾಗಿ ಮತಯಾಚನೆ ಮಾಡಲಾಗಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದವರು ಸೋಲುವ ಭೀತಿಯಿಂದ ಹತಾಶರಾಗಿ ಬಿಜೆಪಿ ಹಾಗೂ ಪ್ರತಾಪಗೌಡ ಪಾಟೀಲ ವಿರುದ್ಧ ಸುಳ್ಳು ಅಪಪ್ರಚಾರಕ್ಕೆ ಇಳಿದಿದ್ದಾರೆ. ಆಂತರಿಕ ಸಮೀಕ್ಷಾ ವರದಿ ಪ್ರಕಾರ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಬಹುಮತದಿಂದ ಗೆಲ್ಲುತ್ತದೆ ಎಂದು ಹೇಳಿದ್ದಾರೆ‘ ಎಂದು ತಿಳಿಸಿದರು.

ಪ್ರತಿ ಬೂತ್ ಮಟ್ಟ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮತದಾರರು ಬಿಜೆಪಿ ಪರವಾಗಿದ್ದಾರೆ. ಇದು ಕಾಂಗ್ರೆಸ್ ಮುಖಂಡರಿಗೆ ನಡುಕು ತರಿಸಿದೆ. ಇದರಿಂದ ಕಂಗಲಾದ ಕಾಂಗ್ರೆಸ್ ಮುಖಂಡರು ಸಣ್ಣತನ ರಾಜಕೀಯ ಇಳಿದಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಾನಂದ ಯಾದವ್, ಎಸ್ಸಿ ಮೋರ್ಚಾದ ಅಧ್ಯಕ್ಷ ಶರಣಬಸವ ವಕೀಲ, ಪುರಸಭೆ ಸದಸ್ಯ ಮೌನೇಶ ಮುರಾರಿ ಸೇರಿದಂತೆ ಪಕ್ಷದ ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.