ಭಾನುವಾರ, ಏಪ್ರಿಲ್ 11, 2021
21 °C

ದೇಣಿಗೆಯ ಅನುಮಾನ ಬೇಡ: ಬಸನಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುದಗಲ್ (ರಾಯಚೂರು ಜಿಲ್ಲೆ): ’ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರಕ್ಕಾಗಿ ಪ್ರತಿ ಗ್ರಾಮಗಳಲ್ಲಿ ಕಾರ್ಯಕರ್ತರು ನೀಡಿದ್ದ ದೇಣಿಗೆಯ ಬಗ್ಗೆ ಯಾರೂ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ. ಅಗತ್ಯವಿದ್ದರೆ, ಆ ಗ್ರಾಮಗಳಿಗೆ ಹೋಗಿ ಪರಿಶೀಲನೆ ಮಾಡಲಿ. ಈ ವಿಷಯದಲ್ಲಿ ದೇವರ ಮುಂದೆ ಪ್ರಮಾಣ ಮಾಡಲೂ ಸಿದ್ಧ‘ ಎಂದು ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಯಮನೂರಪ್ಪ ಉರುಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಪತ್ರಕರ್ತರ ಬಳಿ ಅವರು ಮಾತನಾಡಿದರು. 

‘ಬಿಜೆಪಿ ಅಭ್ಯರ್ಥಿ ಸೋಲಿನ ಭಯದಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮಸ್ಕಿ ಕ್ಷೇತ್ರದ ಜನರು ಇದೆಲ್ಲವನ್ನೂ ನೋಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ಬಂದ ಜನಪರ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ ಆಗಲಿವೆ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು