ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಬಯ್ಯಾಪೂರ ಮತ ಪ್ರಚಾರ

Last Updated 10 ಏಪ್ರಿಲ್ 2021, 12:26 IST
ಅಕ್ಷರ ಗಾತ್ರ

ಮಸ್ಕಿ: ಮಸ್ಕಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ಪರವಾಗಿ ಮತ ಚಲಾಯಿಸಬೇಕು ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಸೇರಿದಂತೆ ವಿವಿಧ ಮುಖಂಡರು ಕ್ಷೇತ್ರದ ವಿವಿಧ ಹಳ್ಳಿಗಳ ಜನರಲ್ಲಿ ಶನಿವಾರ ಮನವಿ ಮಾಡಿದರು.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮನೆ ಮನೆ ಭೇಟಿ ನೀಡಿದ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಕಾಂಗ್ರೆಸ್ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್‌ನಿಂದ ಆಯ್ಕೆಯಾದ ಪ್ರತಾಪಗೌಡ ಪಾಟೀಲ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿ ಬಿಜೆಪಿಗೆ ಮಾರಾಟವಾಗಿದ್ದಾರೆ, ಅಂತವರನ್ನು ಈ ಚುನಾವಣೆಯಲ್ಲಿ ಸೋಲಿಸಬೇಕು ಎಂದು ಕರೆ ನೀಡಿದರು.

ಮಾಜಿ ಸಚಿವ ಶಿವರಾಜ ತಂಗಡಗಿ ಸಾನಬಾಳ, ಬುದ್ದಿನ್ನಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಮಾಜಿ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಅನೇಕ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT