ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ’

Last Updated 11 ಏಪ್ರಿಲ್ 2021, 11:56 IST
ಅಕ್ಷರ ಗಾತ್ರ

ಮಸ್ಕಿ: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದರು.

ಪಟ್ಟಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಂಘಟನೆಗಳ ಒಕ್ಕೂಟದ ಮುಖಂಡರಾದ ಜಗನ್, ದೊಡ್ಡಪ್ಪ ಮುರಾರಿ, ಸಿ. ದಾನಪ್ಪ, ದೇವೆಂದ್ರಗೌಡ, ಬಸಲಿಂಗಪ್ಪ ಅವರು, ‘ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ರೈತ, ದಲಿತ ಹಾಗೂ ಕಾರ್ಮಿಕ ವಿರೋಧಿ ಸರ್ಕಾರವಾಗಿದೆ‘ ಎಂದು ದೂರಿದರು.

‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆರಿದೆ. ಬಡವರು ಬದುಕು ನಡೆಸಲು ಕಷ್ಟವಾಗಿದೆ. ಆದರೂ ಕೂಡಾ ಬಿಜೆಪಿ ಸರ್ಕಾರ ನಿದ್ದೆಯಿಂದ ಎದ್ದೇಳುತ್ತಿಲ್ಲ. ಸರ್ಕಾರಕ್ಕೆ ಬಿಸಿ ಮುಟ್ಟಬೇಕಾದರೆ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು‘ ಎಂದರು.

‘ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಶಾಲುಗಳನ್ನು ಹಾಕಿಕೊಂಡು ಅಭ್ಯರ್ಥಿ ಪರವಾಗಿ 200 ಕ್ಕೂ ಹೆಚ್ಚು ಅಧಿಕ ವಾಹನಗಳಲ್ಲಿ ಅನಧಿಕೃತವಾಗಿ ಓಡಾಟ ನಡೆಸುತ್ತಿರುವವರ ಬಗ್ಗೆ ಚುನಾವಣೆ ಆಯೋಗ ನಿಗಾ ವಹಿಸಿ ಅವುಗಳನ್ನು ಚುನಾವಣೆ ಖರ್ಚು ವೆಚ್ಚಕ್ಕೆ ಹಾಕಿಕೊಳ್ಳಬೇಕು‘ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT