ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರಿಗೆ ಕೋವಿಡ್ ದೃಢಪಟ್ಟಿದೆ. ಸದ್ಯಕ್ಕೆ ಅವರು ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ. ಅಗತ್ಯವಿದ್ದಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.

'ಮಾನ್ಯ ಮತದಾರ ಬಂಧುಗಳಲ್ಲಿ ನನ್ನ ಕಳಕಳಿಯ ಮನವಿ. ನನಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ ಇದ್ದೇನೆ. ಯಾರೂ ಆತಂಕ ಪಡಬೇಕಿಲ್ಲ. ಶೀಘ್ರ ಗುಣಮುಖನಾಗಿ ಬರುತ್ತೇನೆ. ಏ.17 ರಂದು ಮತದಾನ ಇದ್ದು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡುತ್ತಾರೆ. ಅವರನ್ನು ನಾನೇ ಎಂದು ಪರಿಭಾವಿಸಿ ಆಶೀರ್ವದಿಸಲು ಮತ್ತು ಕಮಲದ ಗುರುತಿಗೆ ಮತ ನೀಡಲು ಕೋರುತ್ತೇನೆ’ ಎಂದು ಪಾಟೀಲ ಅವರು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಿಬಿಟ್ಟಿದ್ದಾರೆ.

‘ನಿಮ್ಮ ಮತ್ತು ನಿಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಲು ವಿನಂತಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.