ಮಂಗಳವಾರ, ಮೇ 11, 2021
24 °C

ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರಿಗೆ ಕೋವಿಡ್ ದೃಢಪಟ್ಟಿದೆ. ಸದ್ಯಕ್ಕೆ ಅವರು ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ. ಅಗತ್ಯವಿದ್ದಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.

'ಮಾನ್ಯ ಮತದಾರ ಬಂಧುಗಳಲ್ಲಿ ನನ್ನ ಕಳಕಳಿಯ ಮನವಿ. ನನಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ ಇದ್ದೇನೆ. ಯಾರೂ ಆತಂಕ ಪಡಬೇಕಿಲ್ಲ. ಶೀಘ್ರ ಗುಣಮುಖನಾಗಿ ಬರುತ್ತೇನೆ. ಏ.17 ರಂದು‌‌ ಮತದಾನ ಇದ್ದು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡುತ್ತಾರೆ. ಅವರನ್ನು ನಾನೇ ಎಂದು ಪರಿಭಾವಿಸಿ ಆಶೀರ್ವದಿಸಲು ಮತ್ತು ಕಮಲದ ಗುರುತಿಗೆ ಮತ ನೀಡಲು ಕೋರುತ್ತೇನೆ’ ಎಂದು ಪಾಟೀಲ ಅವರು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಿಬಿಟ್ಟಿದ್ದಾರೆ.

‘ನಿಮ್ಮ ಮತ್ತು ನಿಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಲು ವಿನಂತಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು