ಮಂಗಳವಾರ, ಮೇ 11, 2021
26 °C
ಕರ್ನಾಟಕ ರೈತ ಸಂಘದ ಅಧ್ಯಕ್ಷ ಡಿ.ಎಚ್.ಪೂಜಾರ ಕರೆ

ಬಿಜೆಪಿ, ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ-ಡಿ.ಎಚ್.ಪೂಜಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ: ‘ದೇಶದ ರೈತರನ್ನು ನಿರ್ಲಕ್ಷಿಸಿ ದೊಡ್ಡ ದೊಡ್ಡ ಉದ್ಯಮಿಗಳ ಪರವಾಗಿ ಇರುವ ಬಿಜೆಪಿ ಹಾಗೂ ಕಾಂಗ್ರೆಸ್ ಎರಡನ್ನು ಮಸ್ಕಿ ಉಪ ಚುನಾವಣೆಯಲ್ಲಿ ಸೋಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು‘ ಎಂದು ಕರ್ನಾಟಕ ರೈತ ಸಂಘ (ಕೆ ಆರ್ ಎಸ್) ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್. ಪೂಜಾರಿ ಕರೆ ನೀಡಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ‘ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ಬೇಕಾಗಿರಲಿಲ್ಲ. ಹಣದ ಆಸೆಗಾಗಿ ಜನರಿಂದ ಆಯ್ಕೆಯಾದ ಶಾಸಕ ಪ್ರತಾಪಗೌಡ ಪಾಟೀಲರು ಜನರ ಅಭಿಪ್ರಾಯ ಪಡೆಯದೆ ಮತ್ತೊಂದು ಪಕ್ಷಕ್ಕೆ ಸೇರಿ ಉಪ ಚುನಾವಣೆಗೆ ಕಾರಣರಾಗಿದ್ದಾರೆ’ ಎಂದರು.

’ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನಪರವಾಗಿಲ್ಲ. ಕಾಂಗ್ರೆಸ್ ಕೂಡಾ ಮುಖೇಶ ಅಂಬಾನಿ ಪರವಾಗಿ ಕೆಲಸ ಮಾಡುತ್ತಿದೆ. ಈ ಎರಡು ಪಕ್ಷಗಳು ರಾಷ್ಟ್ರಕ್ಕೆ ಮಾರಕ. ನಾಲ್ಕು ತಿಂಗಳಿನಿಂದ ರೈತರು ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದರೂ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ’ ಎಂದರು.

ಹೀಗಾಗಿ ಮತದಾರರು 17 ರಂದು ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಬಿಟ್ಟು ಪಕ್ಷೇತರ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಎಂದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ನಿಲೋಗಲ್, ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ದಿನ್ನಿ, ಮಾರುತಿ ಜಿನ್ನಾಪೂರ, ಬಿ.ಎಸ್. ಯರದಿಹಾಳ, ಸಿದ್ದಾರ್ಥ ಇತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು