ತುರ್ವಿಹಾಳ: ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಹಾಗೂ ಸಂಸದ ಸಂಗಣ್ಣ ಕರಡಿ, ಅವರು ತುರ್ವಿಹಾಳ ವ್ಯಾಪ್ತಿಯ ಗುಂಜಳ್ಳಿ ಕ್ಯಾಂಪ್, ಮಧ್ಯಕ್ಯಾಂಪ್, ಬಸವಣ್ಣ ಕ್ಯಾಂಪ್, ಶ್ರೀನಿವಾಸ್ ಕ್ಯಾಂಪ್ ಮತ್ತು ತುರ್ವಿಹಾಳ ಪಟ್ಟಣ ಸೇರಿದಂತೆ ಶುಕ್ರವಾರ ಪ್ರಚಾರ ನಡೆಸಿದರು.

ಪ್ರಚಾರದ ವೇಳೆ ಮಾತನಾಡಿದ ಅವರು, ಪ್ರತಾಪಗೌಡ ಪಾಟೀಲ್ ಅವರು ಮಸ್ಕಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕಾದರೇ ಮತದಾರರರು ಮತ ನೀಡಿ ಆಶೀರ್ವದಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ಕಳೆದ 70 ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೇಸ್ ಪಕ್ಷ ದೇಶದ ಪ್ರಗತಿಗೆ ಹಾಗೂ ದೇಶದ ಭದ್ರತೆಗೆ ನೀಡಿರುವ ಕೊಡುಗೆ ಶೂನ್ಯ ಎಂದರು.

ಪಟ್ಟಣಕ್ಕೆ ಆಗಮಿಸಿದ ಸಚಿವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ನಂತರ ಪಟ್ಟಣದಲ್ಲಿರುವ ಎಲ್ಲ ಪ್ರತಿಮೆಗಳಿಗೆ ಹಾಕಿ, ಪ್ರಮುಖ ಬೀದಿಯಲ್ಲಿ ಪ್ರಚಾರ ನಡೆಸಿದರು.

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್, ಯಲಬುರ್ಗಾ ಶಾಸಕ ಹಾಲಪ್ಪ ಆಚಾರಿ, ಸುರಪುರ ಶಾಸಕ ರಾಜುಗೌಡ, ಶಾಸಕ ಪ್ರೀತಂಗೌಡ, ಮಾಜಿ ಸಂಸದ ಕೆ.ವಿರುಪಾಕ್ಷಪ್ಪ, ಮಾಜಿ ಶಾಸಕ ಹಾಗೂ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜ ಹವಲ್ದಾರ, ವಿರೇಶ ಸಾಲೋಣಿ, ಶರಣಬಸವ ಪಾಟೀಲ್, ಎಸ್ ಟಿ ಜಿಲ್ಲಾಧ್ಯಕ್ಷ ಅಯ್ಯಪ್ಪ ನಾಯಕ ಮ್ಯಾಕಲ್, ಹಾಗೂ ಸಾವಿರಾರು ಸಂಖ್ಯೆಯ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.