ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಬಿಜೆಪಿ ಪರ ವಿಜಯೇಂದ್ರ ಮತಯಾಚನೆ

ಕಾಂಗ್ರೆಸ್ ಪರ ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ ಪ್ರಚಾರ ಇಂದಿನಿಂದ
Last Updated 4 ಏಪ್ರಿಲ್ 2021, 13:37 IST
ಅಕ್ಷರ ಗಾತ್ರ

ಮಸ್ಕಿ: ಹೆಚ್ಚಿದ ಬಿಸಿಲಿನ ತಾಪದ ನಡುವೆಯೂ ಉಪ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚತೊಡಗಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ರಾಜ್ಯದ ನಾಯಕರ ದಂಡು ಪಟ್ಟಣದಲ್ಲಿ ಬಿಡು ಬಿಟ್ಟಿದ್ದು ಉಪ ಚುನಾವಣೆ ಗೆಲ್ಲಲು ಎರಡು ಪಕ್ಷಗಳು ಬಿರುಸಿನ ಪ್ರಚಾರ ನಡೆಸಿದ್ದಾರೆ.

ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಭಾನುವಾರ ಬೆಳಿಗ್ಗೆ ಕನ್ನಾಳ, ತಲೇಖಾನ, ಮೆದಿಕಿನಾಳ, ಮಾರದಿನ್ನಿ, ಅಂಕುಶದೊಡ್ಡಿ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸುಡು ಬಿಸಿನಲ್ಲಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರವಾಗಿ ಮತಯಾಚನೆ ನಡೆಸಿದರು.

ಗ್ರಾಮದಲ್ಲಿ ಮಹಿಳೆಯರು ಆರತಿ ಬೆಳಗಿ ಮುಖಂಡರನ್ನು ಬರಮಾಡಿಕೊಂಡರು.

ಶಾಸಕ ದೊಡ್ಡನಗೌಡ ಲೆಕ್ಕಿಹಾಳ, ಮಾಜಿ ಶಾಸಕ ಮಾನಪ್ಪ ವಜ್ಜಲ್, ಸೇರಿದಂತೆ ಅನೇಕ ಮುಖಂಡರು ಇದ್ದರು.

ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ಪರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಶಾಸಕ ಎನ್.ಎಸ್. ಬೋಸರಾಜ, ಹಂಪನಗೌಡ ಬಾದರ್ಲಿ ಸೇರಿದಂತೆ ಅನೇಕ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ.

ಡಿಕೆಶಿ, ಸಿದ್ದರಾಮಯ್ಯ ಪ್ರಚಾರ ಇಂದಿನಿಂದ

ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರದಿಂದ ಎರಡು ದಿನಗಳ ಕಾಲ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

ತುರ್ವಿಹಾಳ ಹಾಗೂ ಬಳಗಾನೂರು ಪಟ್ಟಣ ಪಂಚಾಯಿತಿಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ತಿಳಿಸಿದ್ದಾರೆ.

ಮಾಜಿ ಸಚಿವ ಶಿವರಾಜ ತಂಗಡಗಿ ಹಾಗೂ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ಸಿದ್ಧತೆಗಳು ನಡೆದಿವೆ.

ನಡಹಳ್ಳಿ, ಪರಣ್ಣ ಮುನವಳ್ಳಿ ಮನೆ ಮನೆ ಭೇಟಿ

ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲು ಶಾಸಕರಾದ ಎ.ಎಸ್.ನಡಹಳ್ಳಿ, ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಡಾ. ಶಿವರಾಜ ಪಾಟೀಲ ಭಾನುವಾರ ಪಟ್ಟಣದ ವಿವಿಧೆಡೆ ಮನೆ ಮನೆಗೆ ತೆರಳಿ ಪ್ರತಾಪಗೌಡ ಪಾಟೀಲ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಮಹಿಳಾ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಭಾರತಿ ಶೆಟ್ಟಿ ಮಹಿಳಾ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆ ಪ್ರಚಾರದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಮಾಜಿ ಶಾಸಕ ದೊಡ್ಡನಗೌಡ ಸೇರಿದಂತೆ ಅನೇಕ ಮುಖಂಡರು ತಮ್ಮ ತಮ್ಮ ಸಮುದಾಯದ ಮನೆಗಳಿಗೆ ಭೇಟಿ ನೀಡಿ ಪ್ರತಾಪಗೌಡರ ಪರ ಮತಯಾಚನೆ ಮಾಡಿದರು.

ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಸರಣಿ ಸಭೆಗಳನ್ನು ನಡೆಸುವ ಮೂಲಕ ಪ್ರತಾಪಗೌಡ ಪಾಟೀಲರ ಗೆಲುವಿಗೆ ತಂತ್ರಗಳನ್ನು ರೂಪಿಸುವಲ್ಲಿ ನಿರತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT