ಭಾನುವಾರ, ಏಪ್ರಿಲ್ 18, 2021
29 °C

ಸಣ್ಣ ಸಮುದಾಯಗಳ ಅಭಿವೃದ್ಧಿಗೂ ಆದ್ಯತೆ: ರಘು ಕೌಟಿಲ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸಾಪುರ (ಕವಿತಾಳ): ‘ರಾಜ್ಯದಲ್ಲಿ ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪ ಅವರು ಎಲ್ಲಾ ಜಾತಿ ಜನಾಂಗದವರ ಏಳಿಗೆಗೆ ಪ್ರಾಮುಖ್ಯತೆ ನೀಡಿದ್ದಾರೆ’ ಎಂದು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ ಹೇಳಿದರು.

ಬಸಾಪುರ ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ‘ಸಮುದಾಯಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‍ ಅವರಿಗೆ ಮತ ನೀಡುವಂತೆ’ ಮನವಿ ಮಾಡಿದರು.

ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ, ತಾಲ್ಲೂಕು ಪಂಚಾಯಿತಿ ಸದಸ್ಯ ಶಿವಕುಮಾರ ಮಿಟ್ಟಿಮನಿ, ಮುಖಂಡರಾದ ಬಸವರಾಜ ವಕೀಲ, ವೆಂಕಟೇಶ, ಹುಚ್ಚಪ್ಪ ಸೈದಾಪುರ, ಯಲ್ಲಪ್ಪ, ಯಮನಪ್ಪ, ಬಸವರಾಜ, ಶಂಕರಪ್ಪ, ಸೂಗಪ್ಪ, ನಾಗರಾಜ, ಸತೀಶ, ಹನುಮೇಶ, ಪಂಪಣ್ಣ, ಪರಸಪ್ಪ, ದೊಡ್ಡ ಹುಚ್ಚಪ್ಪ, ದೇವರಾಜ ಮತ್ತಿತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು