ಶುಕ್ರವಾರ, ಏಪ್ರಿಲ್ 16, 2021
31 °C
ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪರ ಬೋಸರಾಜ ಪ್ರಚಾರ

‘ಬಿಜೆಪಿ ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ’–ಬೋಸರಾಜ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿ ಬಿಜೆಪಿ ಪಕ್ಷಾಂತರ ಮಾಡಿದ ಪ್ರತಾಪಗೌಡ ಪಾಟೀಲರನ್ನು ಉಪ ಚುನಾವಣೆಯಲ್ಲಿ ಸೋಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ ಕರೆ ನೀಡಿದರು.

ತಾಲ್ಲೂಕಿನ ಗುಡಿಹಾಳ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾದ್ಯ, ಬಿಜೆಪಿ ಜಾತಿ ಹಾಗೂ ಕೊಮು ರಾಜಕೀಯ ಮಾಡುವ ಮೂಲಕ ಜನರಲ್ಲಿ ಕಂದಕ ನಿರ್ಮಿಸುತ್ತಿದೆ‘ ಎಂದರು.

 ಮುಖಂಡರಾದ ಹಂಪಯ್ಯ ಸಾಹುಕಾರ, ಕೆ. ಕರಿಯಪ್ಪ, ಅಭ್ಯರ್ಥಿ ಆರ್. ಬಸನಗೌಡ. ಕಾಂಗ್ರೆಸ್ ನಗರ ಬ್ಲಾಕ್ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಸೇರಿದಂತೆ ಇತರರು ಇದ್ದರು.

5 ರಂದು ಸಿದ್ದು, ಡಿಕೆಶಿ ಪ್ರಚಾರ: ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ 5 ರಿಂದ ಎರಡು ದಿನಗಳ ಕಾಲ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು