ಗುರುವಾರ , ಏಪ್ರಿಲ್ 22, 2021
22 °C

ಮಸ್ಕಿ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು: ತಾಲ್ಲೂಕಿನ ಜೋಳದರಾಶಿ ಕ್ಯಾಂಪ್, ನಾರಾಯಣ ನಗರಕ್ಯಾಂಪ್, ಹಾರಾಪುರ ಕ್ಯಾಂಪ್ ಸೇರಿ ವಿವಿಧ ಕ್ಯಾಂಪ್‍ಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರವಾಗಿ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಭಾನುವಾರ ಪ್ರಚಾರ ನಡೆಸಿದರು.

ನಂತರ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲಾ ವರ್ಗದವರ ಏಳ್ಗೆಗೆಗೆ ಶ್ರಮಿಸುತ್ತಿದೆ. ಇಂಥ ಸರ್ಕಾರ ರಚನೆಗೆ ಪ್ರತಾಪಗೌಡರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರನ್ನು ಬೆಂಬಲಿಸಿ, ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕರಾದ ಪಾಪಾರಡ್ಡಿ, ಎನ್.ಶಂಕ್ರಪ್ಪ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೊಲ್ಲಾ ಶೇಷಗಿರಿರಾವ, ಬಿಜೆಪಿ ಮಂಡಲ ಗ್ರಾಮೀಣ ಅಧ್ಯಕ್ಷ ಟಿ.ಹನುಮೇಶ ಸಾಲಗುಂದ, ಮಸ್ಕಿ ಕ್ಷೇತ್ರದ ರೈತ ಮೋರ್ಚಾ ಅಧ್ಯಕ್ಷ ಜಿ.ವೆಂಕಟೇಶ್ವರಾವ್, ಪಿ.ಕೃಷ್ಣ, ರೈತ ಮೋರ್ಚಾ ಅಧ್ಯಕ್ಷ ಗನ್ನಿ ವೀರರಾಜು, ಮಲ್ಲಿಕಾರ್ಜುನ ಭೀಮರಾಜಕ್ಯಾಂಪ್, ದೊರೆಬಾಬು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು