ಸೋಮವಾರ, ಮೇ 17, 2021
21 °C

ಕಾಂಗ್ರೆಸ್ ಅಭ್ಯರ್ಥಿ ಪರ ರಾಮಲಿಂಗಾರೆಡ್ಡಿ, ರೇವಣ್ಣ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುದಗಲ್: ಮಸ್ಕಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಪರ ಶಾಸಕ ರಾಮಲಿಂಗಾರೆಡ್ಡಿ ಮಾಜಿ ಸಚಿವ ಎಚ್.ಎಂ.ರೇವಣ್ ಅವರು ಪ್ರಚಾರ ನಡೆಸಿದರು.

ಪಟ್ಟಣ ಸಮೀಪದ ಮಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷದ ಆಡಳಿತ ಅವಧಿಯಲ್ಲಿ ಮಾಡಿದ ಜನಪರ ಯೋಜನೆಗಳು ನಮ್ಮ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಗೆಲುವಿಗೆ ಶ್ರೀರಕ್ಷೆಯಾಗುತ್ತದೆ. ಬಿಜೆಪಿಯವರು ಸೋಲಿನ ಭಯದಿಂದ ಮನೆ ಮನೆ ಹೋಗಿ ಮತದಾರರಿಗೆ ಹಣ ಹಂಚುತ್ತಿದ್ದಾರೆ. ಬಸನಗೌಡ ತುರ್ವಿಹಾಳ ಶಾಸಕರಾಗುವುದು ಬಹುತೇಕ ಖಚಿತ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳು ನೀಡುತ್ತಿದ್ದು, ಮಸ್ಕಿ ವಿಧಾನಸಭಾ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದರು.

ಲಿಂಗಸುಗೂರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಭೂಪನಗೌಡ ,  ಮುಖಂಡ ಶರಣಪ್ಪ ಮೇಟಿ, ಹನುಮಂತಪ್ಪ ಕಂದಗಲ್, ಹೂನೂರು ಗ್ರಾಮ ಪಂಚಾಯಿತಿ ಸದಸ್ಯ ಆದಪ್ಪ ಬ್ಯಾಲಿಹಾಳ, ಮಟ್ಟೂರು ಗ್ರಾಮಸ್ಥರಾದ ಬಸವಂತಪ್ಪ, ಮಾನಪ್ಪ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು