ಮಸ್ಕಿ: ಕೇಂದ್ರ ಸರ್ಕಾರ ಕೈಗೊಂಡಿರುವ ಜನಗಣತಿಯ ಪ್ರಥಮ ಹಂತ ಏ.1ರಿಂದ 15ರವರೆಗೆ ನಡೆಯಲಿದೆ ಎಂದು ತಹಶೀಲ್ದಾರ್ ಮಂಜುನಾಥ ಬೋಗಾವತಿ ತಿಳಿಸಿದ್ದಾರೆ.

‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಈಗಾಗಲೇ ಗಣತಿ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ’ ಎಂದು ಹೇಳಿದರು.

ಜನರು se.census.gov.in ವೆಬ್ಸೈಟ್ಗೆ ಲಾಗಿನ್ ಆಗಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದು. ಲಾಗಿನ್ ಪ್ರಕ್ರಿಯೆ ಸರಳವಾಗಿದ್ದು, ಮೊದಲು ಮೊಬೈಲ್ಗೆ ಬರುವ ಒಟಿಪಿ ನಮೂದಿಸಿದ ಬಳಿಕ ಅಗತ್ಯ ಮಾಹಿತಿ ಭರ್ತಿ ಮಾಡುವ ಮೂಲಕ ನೋಂದಣಿ ಪೂರ್ಣಗೊಳಿಸಬಹುದು. ನೋಂದಣಿ ನಂತರ ದೊರೆಯುವ ಸಂಖ್ಯೆಯನ್ನು ಗಣತಿಗಾಗಿ ಮನೆಗೆ ಬರುವ ಸಿಬ್ಬಂದಿಗೆ ನೀಡಿದರೆ, ಅವರು ಅದನ್ನು ಅಪ್ಡೇಟ್ ಮಾಡುತ್ತಾರೆ. ಇದರಿಂದ ಗಣತಿ ಕಾರ್ಯ ವೇಗವಾಗಿ ಮತ್ತು ಸುಗಮವಾಗಿ ನಡೆಯಲು ಸಹಕಾರಿ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-32-1176768785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.