ಮಸ್ಕಿ: ಗೃಹಲಕ್ಷ್ಮೀ ಯೋಜನೆಯಡಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ 44 ಸಾವಿರ ಮಹಿಳೆಯರ ಖಾತೆಗೆ 24 ಕಂತುಗಳಲ್ಲಿ ಒಟ್ಟು ₹8.93 ಕೋಟಿ ಹಣ ಪಾವತಿಸಲಾಗಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಮೈಬುಸಾಬ ಮುದ್ದಾಪುರ ತಿಳಿಸಿದ್ದಾರೆ.

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಫಲಾನುಭವಿಗಳಿಗೆ ಬಾಕಿ ಉಳಿದ ಮೂರು ಕಂತುಗಳ ಹಣವನ್ನು ಶೀಘ್ರ ಜಮಾ ಮಾಡಲಾಗುವುದು’ ಎಂದು ಹೇಳಿದರು.

‘ಅನ್ನಭಾಗ್ಯ ಯೋಜನೆಯ ಅನುಷ್ಠಾನಕ್ಕಾಗಿ ಮುಂದಿನ ತಿಂಗಳಿನಿಂದ ಮಸ್ಕಿಯಲ್ಲಿ ಆಹಾರ ಇಲಾಖೆ ಕಚೇರಿ ಆರಂಭವಾಗಲಿದೆ. ಯುವನಿಧಿ ಯೋಜನೆಯಡಿ 1,977 ಪದವೀಧರರು ಹಾಗೂ 26 ಡಿಪ್ಲೋಮಾ ವಿದ್ಯಾರ್ಥಿಗಳು ಲಾಭ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

ಸ್ತ್ರೀಶಕ್ತಿ ಯೋಜನೆಯಡಿ ಕ್ಷೇತ್ರದಲ್ಲಿ 1.42 ಲಕ್ಷ ಮಹಿಳೆಯರು ಉಚಿತ ಸಾರಿಗೆ ಸೌಲಭ್ಯ ಪಡೆದಿದ್ದು, ಅದರಿಂದ ಸಾರಿಗೆ ಇಲಾಖೆಗೆ ₹58.69 ಕೋಟಿ ಆದಾಯ ಲಭಿಸಿದೆ. ಈಗಾಗಲೇ ಶೇ 70ರಷ್ಟು ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗೆ ಭರಿಸಿದೆ. ಉಳಿದ ಶೇ 30ರಷ್ಟು ಹಣವನ್ನು ಶೀಘ್ರದಲ್ಲೇ ಜಮಾ ಮಾಡಲಾಗುವುದು’ ಎಂದು ಹೇಳಿದರು.

‘ಗೃಹಜ್ಯೋತಿ ಯೋಜನೆಯಡಿ 18,588 ಫಲಾನುಭವಿಗಳು ಲಾಭ ಪಡೆದಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಯಶಸ್ವಿಯಾಗಲು ಅಧಿಕಾರಿಗಳ ಸಹಕಾರ ಅಗತ್ಯ’ ಎಂದರು.

ತಾ.ಪಂ ಸಹಾಯಕ ನಿರ್ದೇಶಕ ಸೋಮನಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ಯಾರಂಟಿ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.