ಮಸ್ಕಿ: ಮಂಗಳವಾರ ಸಂಜೆ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ತಾಲ್ಲೂಕಿನ ಹಲವೆಡೆ ವಿದ್ಯುತ್ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡು ಆರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳು ಕತ್ತಲಲ್ಲಿ ಮುಳುಗಿದ ಘಟನೆ ನಡೆದಿದೆ.

ಮಸ್ಕಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನೂರಕ್ಕೂ ಹೆಚ್ಚಿನ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಮಸ್ಕಿ ಪಟ್ಟಣ ಒಂದರಲ್ಲೇ 20ಕ್ಕೂ ಹೆಚ್ಚು ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಹಲವು ಕಡೆ ಕಂಬಗಳು ಮುರಿದು ಬಿದ್ದಿವೆ. ಜೆಸ್ಕಾಂ ಎಂಜಿನಿಯರ್ ವೆಂಕಟೇಶ ನೇತೃತ್ವದಲ್ಲಿ ಸಿಬ್ಬಂದಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿದರು. ಪಟ್ಟಣದ ಬಹುತೇಕ ಭಾಗಗಳಲ್ಲಿ ವಿದ್ಯುತ್ ಪೂರೈಕೆಯನ್ನು ಪುನರರಾಂಭಿಸಿದರು.

ರಸ್ತೆಗೆ ಬಿದ್ದಿದ್ದ ಮರಗಳನ್ನು ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿ ತೆರವುಗೊಳಿಸಿದರು.

ಬುಧವಾರ ಬೆಳಿಗ್ಗೆ ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ಮುಖ್ಯಾಧಿಕಾರಿ ನರಸರೆಡ್ಡಿ, ಜೆಸ್ಕಾಂ ಇಇ ವಿಷ್ಣು, ಎಇಇ ವೆಂಕಟೇಶ, ಎಂಜಿನಿಯರ್ ವೆಂಕಟೇಶ ಸೇರಿದಂತೆ ಹಿರಿಯ ಅಧಿಕಾರಿಗಳು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾರಲದಿನ್ನಿ, ಅಂಕುಶದೊಡ್ಡಿ, ಸಂತೆ ಕೆಲ್ಲೂರು, ಅಡವಿಭಾವಿ, ಮಟ್ಟೂರು, ಅಡವಿಭಾವಿ ತಾಂಡಾ, ಶಂಕರನಗರ ಕ್ಯಾಂಪ್ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿಯಿಂದ ಬುಧವಾರ ಸಂಜೆವರೆಗೂ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ಇದರಿಂದ ಗ್ರಾಮಸ್ಥರು ಪರದಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-32-1573620140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.