ಮಸ್ಕಿ: ಪಟ್ಟಣದಲ್ಲಿ ಮಂಗಳವಾರ ಸಂಜೆ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಹಸು ಹಾಗೂ 20ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ.

ಸಂಜೆ ಆಕಾಶದಲ್ಲಿ ಮೋಡಗಳು ದಟ್ಟೈಸಿದವು. ಬಳಿಕ ಬಿರುಗಾಳಿ ಬೀಸಲಾರಂಭಿಸಿತು. ನಂತರ ಗುಡುಗು–ಸಿಡಿಲಿನ ಸದ್ದಿನೊಂದಿಗೆ ಮಳೆ ಆರಂಭವಾಯಿತು. ಸಿಡಿಲಿನ ಸದ್ದಿಗೆ ಜನರು ಬೆಚ್ಚಿಬಿದ್ದರು.

ಬಸವೇಶ್ವರ ನಗರ, ವಾಲ್ಮೀಕಿ ನಗರ ಸೇರಿದಂತೆ ವಿವಿಧೆಡೆ ಮರಗಳು ನೆಲಕ್ಕುರುಳಿವೆ. ಮರಗಳು ಬಿದ್ದು ಮೂರು ಕಾರು ಹಾಗೂ ಬೈಕ್ಗಳು ಜಖಂಗೊಂಡಿವೆ.

ಬಳಗಾನೂರು ರಸ್ತೆಯಲ್ಲಿರುವ ಸಪ್ತಗಿರಿ ಡಾಬಾದ ಮುಂದೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಗಾಳಿಗೆ ಅಂಗಡಿಗಳ ಮುಂದಿನ ತಗಡಿನ ಶೀಟ್ಗಳು ಹಾರಿ ಹೋಗಿವೆ.

ರಸ್ತೆ ಮೇಲೆ ನೀರು ಹರಿದ ಪರಿಣಾಮ ಕೆಲಕಾಲ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡಿದರು. ಕೆಲಕಾಲ ವಿದ್ಯುತ್ ಕಡಿತಗೊಳಿಸಲಾಯಿತು.

ಮುದಗಲ್ನಲ್ಲಿಯೂ 20 ನಿಮಿಷ ಮಳೆಯಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-32-1350568948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.