ಮಸ್ಕಿ: ‘ದೇಶ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ನಿರ್ಣಾಯಕವಾಗಿದ್ದು, ಅವರ ಕೊಡುಗೆ ಸ್ಮರಿಸುವ ಉದ್ದೇಶದಿಂದ ಪ್ರತಿ ವರ್ಷ ಕಾರ್ಮಿಕರ ದಿನ ಆಚರಿಸಲಾಗುತ್ತದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಹೇಳಿದರು.

ತಾಲ್ಲೂಕಿನ ಮಟ್ಟೂರು ಗ್ರಾಮ ಪಂಚಾಯಿತಿಯ ಗುಡಿಹಾಳ ಗ್ರಾಮದ ಕೆರೆ ಹೂಳು ಎತ್ತುವ ನರೇಗಾ ಕಾಮಗಾರಿ ಸ್ಥಳದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಕಾರ್ಮಿಕರ ಹಕ್ಕು, ಕೆಲಸದ ಸ್ಥಳಗಳಲ್ಲಿ ಇರಬೇಕಾದ ಸೌಕರ್ಯ, ನಿವೃತ್ತಿ ಜೀವನಕ್ಕೆ ಬೇಕಾದ ಸವಲತ್ತುಗಳನ್ನು ಪಡೆಯಲು, ಕಾರ್ಮಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ವಿಶ್ವದಾದ್ಯಂತ ಕಾರ್ಮಿಕರ ದಿನ ಆಚರಿಸಲಾಗುತ್ತಿದೆ. ಭಾರತ ದೇಶ ಅತಿ ಹೆಚ್ಚು ಮಾನವ ಸಂಪನ್ಮೂಲ ಹೊಂದಿದ್ದು, ಎಲ್ಲರೂ ಕೈ ಜೋಡಿಸಿದರೆ, ದೇಶಕ್ಕೆ ಸೃಜನಾತ್ಮಕ ಕೊಡುಗೆ ನೀಡಿದಂತಾಗುತ್ತದೆ’ ಎಂದರು.

ಬಿಸಿಲಿನ ಝಳ ಹೆಚ್ಚುತ್ತಿದ್ದು, ಆರೋಗ್ಯದ ಕುರಿತು ಮುಂಜಾಗ್ರತೆ ವಹಿಸಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಪಂ.ರಾ) ಸೋಮನಗೌಡ ಪಾಟೀಲ, ಮಟ್ಟೂರು ಗ್ರಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮನಗೌಡ, ಸಂಯೋಜಕ ಸತೀಶ, ಮಹಾಂತೇಶ ಇದ್ದರು. ಇದೇ ಸಂದರ್ಭದಲ್ಲಿ ಹಿರಿಯ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-32-187888687

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.