ಮಸ್ಕಿ: ‘ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಪರಸ್ಪರ ಸೌಹಾರ್ದದಿಂದ ಬಾಳಿದರೆ ಮಾತ್ರ ಸುಸ್ಥಿರ ಹಾಗೂ ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಈದ್ಗಾ ಮೈದಾನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿ, ‘ತಾಲ್ಲೂಕಿನಲ್ಲಿ ಅಜಾದ್ ಮೌಲಾನಾ ಮೊರಾರ್ಜಿ ವಸತಿ ಶಾಲೆಯನ್ನು ಆರಂಭಿಸಲಾಗಿದ್ದು, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ನೀಡಲಾಗಿದೆ’ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಅವರ, ‘ಉಪವಾಸ, ಸಹನೆ ಮತ್ತು ದಾನ ಧರ್ಮಗಳ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಹಬ್ಬವೇ ರಂಜಾನ್. ಸಮಾಜದಲ್ಲಿ ಪರಸ್ಪರ ಗೌರವ ಮತ್ತು ಸಹಕಾರ ಹೆಚ್ಚಿದಾಗ ಶಾಂತಿ ಮತ್ತು ಏಕತೆ ಬಲವಾಗುತ್ತದೆ’ ಎಂದು ಹೇಳಿದರು. ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಮೈಬುಸಾಬ ಮುದ್ದಾಪುರ, ವೀರೇಶ ಪಾಟೀಲ, ಕೃಷ್ಣ ಚಿಗರಿ, ರಮೇಶ ಕಾಸ್ಲಿ, ಶಿವರೆಡ್ಡಿ ಹಾಗೂ ಮುಸ್ಲಿಂ ಸಮುದಾಯದ ಮುಖಂಡ ಅಬ್ದುಲ್, ಅಜೀಜ್, ಅಬ್ದುಲ್ ಗನಿ, ಶಬ್ಬೀರ್ ಸಾಬ್, ನಿಸಾರ್ ಅಹ್ಮದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-32-542678493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.