ಮಸ್ಕಿ: ಪಟ್ಟಣ ಪುರಸಭೆಯ ನೂತನ ಅಧ್ಯಕ್ಷರಾಗಿ 16ನೇ ವಾರ್ಡ್ನ ಬಿಜೆಪಿ ಸದಸ್ಯ ಸುರೇಶ ಹರಸೂರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಸುರೇಶ ಹರಸೂರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಮಂಜುನಾಥ ಬೋಗಾವತಿ ಘೋಷಿಸಿದರು.

ಅಧ್ಯಕ್ಷರ ಆಯ್ಕೆ ಪ್ರಕಟವಾಗುತ್ತಿದ್ದಂತೆ ಬಿಜೆಪಿ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ, ತಹಶೀಲ್ದಾರ್ ಮಂಜುನಾಥ ಬೋಗಾವತಿ, ಮುಖ್ಯಾಧಿಕಾರಿ ನರಸರೆಡ್ಡಿ ಸೇರಿ ಅನೇಕ ಬಿಜೆಪಿ ಮುಖಂಡರು, ಪುರಸಭೆ ಸದಸ್ಯರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

23 ಸದಸ್ಯ ಬಲದ ಪುರಸಭೆಯಲ್ಲಿ ಒಬ್ಬ ಕಾಂಗ್ರೆಸ್ ಸದಸ್ಯರ ನಿಧನದಿಂದ ಬಲಾಬಲ 22ಕ್ಕೆ ಇಳಿದಿದ್ದು, ಬಿಜೆಪಿಯ 15 ಹಾಗೂ ಕಾಂಗ್ರೆಸ್ನ 7 ಸದಸ್ಯರು ಇದ್ದರು.

ನೂತನ ಅಧ್ಯಕ್ಷ ಸುರೇಶ ಹರಸೂರು ಮಾತನಾಡಿ, ‘ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.

ಪುರಸಭೆ ಅಧ್ಯಕ್ಷ ಸ್ಥಾನ ಬಿಸಿಎಂ(2ಎ) ವರ್ಗಕ್ಕೆ ಮೀಸಲಾಗಿದ್ದು, ಪಕ್ಷದ ಆಂತರಿಕ ಒಪ್ಪಂದದಂತೆ ಮೊದಲ ಅವಧಿಯ ಅಧ್ಯಕ್ಷರಾಗಿದ್ದ ಮಲ್ಲಯ್ಯ ಅಂಬಾಡಿ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.