ಮಸ್ಕಿ: ಪಟ್ಟಣದ ಜೆಎಂಎಫ್ಸಿ ಸಂಚಾರಿ ಪೀಠವನ್ನು ಕಾಯಂ ನ್ಯಾಯ ಪೀಠವನ್ನಾಗಿ ಮಂಜೂರು ಮಾಡಬೇಕು ಎಂದು ವಕೀಲರ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಚ್.ವೀರಭ್ರಪ್ಪ,‘ಮಸ್ಕಿ ಸೇರಿ ಸುತ್ತಮುತ್ತಲಿನ ಗ್ರಾಮಗಳ ಜನರು ನ್ಯಾಯಕ್ಕಾಗಿ ವಾರದಲ್ಲಿ ಎರಡು ದಿನ ನಡೆಯುವ ಸಂಚಾರಿ ಪೀಠಕ್ಕೆ ಬರುತ್ತಾರೆ. ಇದರಿಂದ ನಿಗದಿತ ಅವಧಿಯಲ್ಲಿ ಜನರಿಗೆ ನ್ಯಾಯ ಸಿಗುತ್ತಿಲ್ಲ’ ಎಂದು ಹೇಳಿದರು.

‘ಸಂಚಾರಿ ನ್ಯಾಯಾಲಯದಲ್ಲಿ ಪ್ರಕರಣಗಳ ವಿಚಾರಣೆ ವಿಳಂಬವಾಗುತ್ತಿದ್ದು, ಸಾಮಾನ್ಯ ಜನರಿಗೆ ಆರ್ಥಿಕ ಹಾಗೂ ಮಾನಸಿಕವಾಗಿ ತೊಂದರೆ ಉಂಟಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾಯಂ ನ್ಯಾಯ ಪೀಠ ಸ್ಥಾಪನೆ ಮಾಡುವುದು ಅಗತ್ಯ’ ಎಂದರು.

ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದ ಅವರು ತಕ್ಷಣವೇ ಕಾಯಂ ನ್ಯಾಯ ಪೀಠ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.ಕಾರಟಗಿ ಹಾಗೂ ಕುಕನೂರಿಗೆ ಕಾಯಂ ನ್ಯಾಯ ಪೀಠವನ್ನು ಸರ್ಕಾರ ಮಂಜೂರು ಮಾಡಿದೆ. ಮಸ್ಕಿಯನ್ನು ಸಹ ಗಮನಕ್ಕೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಹಿರಿಯ ವಕೀಲ ರಾಮಣ್ಣ ನಾಯಕ, ಅಮರೇಗೌಡ, ಪಂಪಾಪತಿ, ರಾಮಣ್ಣ, ಮಲ್ಲಪ್ಪ ನಾಗರಬೆಂಚಿ, ಬಸವರಾಜ ಯತ್ನಟ್ಟಿ, ನಬಿ ಶೆಡಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-32-1594148182

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.