ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಡಾ. ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಣೆ

Published 6 ಡಿಸೆಂಬರ್ 2023, 12:58 IST
Last Updated 6 ಡಿಸೆಂಬರ್ 2023, 12:58 IST
ಅಕ್ಷರ ಗಾತ್ರ

ಮಸ್ಕಿ: ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಮಹಾ ಪರಿನಿರ್ವಾಣ ದಿನದ ನಿಮಿತ್ತ ಬುಧವಾರ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ತಾಲ್ಲೂಕು ಆಡಳಿತ ಪರವಾಗಿ ತಹಶೀಲ್ದಾರ್ ಸುಧಾ ಅರಮನೆ ಮಾಲಾರ್ಪಣೆ ಮಾಡಿ ಗೌರವಿಸಿದರು.

ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿಸೇರಿದಂತೆ ಕಂದಾಯ ಇಲಾಖೆ ಹಾಗೂ ಪುರಸಭೆ ಸಿಬ್ಬಂದಿ ಇದ್ದರು. ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಶಾಸಕರ ಸರ್ಕಾರಿ ಕಚೇರಿ, ಬಿಜೆಪಿ, ಕಾಂಗ್ರೆಸ್ ಕಚೇರಿ, ಪುರಸಭೆ, ತಾಲ್ಲೂಕು ಪಂಚಾಯಿತಿ, ಜೆಸ್ಕಾಂ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು.

ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆ ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT