ಮಸ್ಕಿ: ಗ್ರಾಮೀಣಾಭಿವೃದ್ಧಿ ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಪಟ್ಟಣದ ವೆಂಕಟಾಪೂರ ರಸ್ತೆಯಲ್ಲಿ ನಿರ್ಮಾಣವಾಗಲಿರುವ ತಾಲ್ಲೂಕು ಪಂಚಾಯಿತಿಯ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಏ.20 (ಸೋಮವಾರ) ರಂದು ನೆರವೇರಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್ ತಿಳಿಸಿದ್ದಾರೆ.

ಶಾಸಕ ಆರ್. ಬಸನಗೌಡ ತುರ್ವಿಹಾಳ ಅಧ್ಯಕ್ಷತೆ ವಹಿಸಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸಚಿವರಾದ ಎನ್. ಎಸ್. ಬೋಸರಾಜು, ಪ್ರಿಯಾಂಕ ಖರ್ಗೆ ಸೇರಿದಂತೆ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಪುರಸಭೆ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಲ್ಲೂಕು ಪಂಚಾಯಿತಿಯ ನೂತನ ಕಟ್ಟದ ನೀಲಿನಕ್ಷೆಯನ್ನು ಸಿದ್ದಪಡಿಸಲಾಗಿದೆ. ಶಕ್ತಿನಗರ ಕ್ಯಾಷುಟೆಕ್ ಸಂಸ್ಥೆಗೆ ಕಟ್ಟಡದ ನಿರ್ಮಾಣದ ಜವಬ್ದಾರಿ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-32-16454830

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.