ರಾಯಚೂರು: ಅಧಿಕ ಶ್ರಾವಣ ಮಾಸದ ನಿಮಿತ್ತ ಮಂತ್ರಾಲಯ ಮಠದಲ್ಲಿ ಸಾಮೂಹಿಕ ಅಷ್ಟೋತ್ತರ ಪಾರಾಯಣ ನಡೆಯಿತು.
ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಮಹಾ ಅಭಿಷೇಕ ನೆರವೇರಿಸಿದರು.
ಮಠದ ಸಹಸ್ರಾರು ಭಕ್ತರು ಮತ್ತು ಶಿಷ್ಯರು ಪಾಲ್ಗೊಂಡು ಸುಬುಧೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೇ ಆರಾಧನಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.