ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಮೂಹಿಕ ವಿವಾಹ ಬಡವರಿಗೆ ವರದಾನ’

Last Updated 10 ಏಪ್ರಿಲ್ 2021, 13:23 IST
ಅಕ್ಷರ ಗಾತ್ರ

ಸಿರವಾರ: 'ಸಾಮೂಹಿಕ ವಿವಾಹ ಕಾರ್ಯ ಹೆಚ್ಚಾದಂತೆಲ್ಲ ಬಡ ಕುಟುಂಬಗಳಿಗೆ ವರದಾನವಾಗುವ ಜೊತೆಗೆ ಸರ್ವರೂ ಸಮಾನರು ಎಂಬುದನ್ನು ತೋರಿಸುತ್ತದೆ’ ಎಂದು ನೀಲಗಲ್ ಬೃಹನ್ಮಠದ ಡಾ. ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಬಲ್ಲಟಗಿ ಗ್ರಾಮದ ಲಿಂಗೈಕ್ಯ ಗುರುಬಸವಯ್ಯ ತಾತ ಹಿರೇಮಠ ಅವರ 12ನೇ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಒಂದೇ ವೇದಿಕೆಯಲ್ಲಿ ನಡೆಯುವ ಇಂತಹ ವಿವಾಹ ಕಾರ್ಯಕ್ರಮದಲ್ಲಿ ಜಾತಿ, ಮತ, ಪಂಥ ಭೇದವಿಲ್ಲದೆ ಸರ್ವರೂ ಸಮಾನರೆಂಬ ತತ್ವ ಪ್ರತಿಪಾದಿಸುತ್ತದೆ‘ ಎಂದರು.

ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿದರು.

24 ಜೋಡಿಗಳು ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಬಲ್ಲಟಗಿ ಮಠದ ಬಸವರಾಜಯ್ಯ ಸ್ವಾಮಿ ಹಿರೇಮಠ, ಕರೇಗುಡ್ಡ ಮಹಾಂತೇಶ್ವರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಊಟಕನೂರಿನ ಮರಿಬಸವರಾಜ ದೇಶಿಕೇಂದ್ರ ಸ್ವಾಮೀಜಿ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಜಿ.ಕರೆಮ್ಮ ನಾಯಕ, ಕಲ್ಲೂರು ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ್ ಅತ್ತನೂರು, ಜಂಭುನಾಥ ಯಾದವ್ ಕಲ್ಲೂರು ಸೇರಿದಂತೆ ಸುತ್ತಮುತ್ತಲಿನ ಭಕ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT